ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಈ ತಿಂಗಳ ಅಂತ್ಯದಲ್ಲಿ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗಳು ಓಪನ್ ಆಗಲಿವೆ.
ಈ ಸಂಬಂಧ ಕೆ ಎಂ ಎಫ್, ಬಿ ಎಂ ಆರ್ ಸಿ ಎಲ್ ನಡುವೆ ಮಳಿಗೆ ತೆರೆಯೋದಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಬೆಂಗಳಊರಿನ 10 ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆ ತೆರೆಯಲಿದೆ ಎಂದು ಹೇಳಲಾಗುತ್ತಿದೆ.
ಸದ್ಯ ನಮ್ಮ ಮೆಟ್ರೋ ನಿಲ್ದಾಣದ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ, ಸೆಂಟ್ರಲ್ ಕಾಲೇಜು, ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ನಂದಿನಿ ಮಳಿಗೆ ನಿರ್ಮಾಣ ಆಗಿದೆ. ಈ ತಿಂಗಳ ಅಂತ್ಯ ಇಲ್ಲವೇ ಆಗಸ್ಟ್ ಮೊದಲ ವಾರದಲ್ಲಿ ನಂದಿನಿ ಮಳಿಗೆಯು ಓಪನ್ ಆಗಲಿದ್ದು, ಮೆಟ್ರೋ ಪ್ರಯಾಣಿಕರಿಗೆ ನಿಲ್ದಾಣದಲ್ಲಿ ನಂದಿನಿ ಉತ್ಪನ್ನಗಳ ಸವಿ ದೊರೆಯಲಿದೆ.
BREAKING: ಪತನಗೊಂಡ ರಷ್ಯಾದ ಪ್ರಯಾಣಿಕ ವಿಮಾನದಲ್ಲಿ ಯಾರೂ ಬದುಕುಳಿದಿಲ್ಲ: ವರದಿ | Russian plane crash
ಕಪ್ಪು ನಾಲಿಗೆಯನ್ನು ಹೊಂದಿರುವ ಯಾರಾದರೂ ನಿಮ್ಮನ್ನು ನಿಂದಿಸಿದರೆ, ಮೊದಲು ಇದನ್ನು ಮಾಡಿ, ಯಾವುದೇ ಸಮಸ್ಯೆ ಇರುವುದಿಲ್ಲ