Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಅರಿವು ಕೇಂದ್ರಗಳಲ್ಲಿ `ಓದುವ ಬೆಳಕು’ ಕಾರ್ಯಕ್ರಮ ಆರಂಭ!
KARNATAKA

ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಅರಿವು ಕೇಂದ್ರಗಳಲ್ಲಿ `ಓದುವ ಬೆಳಕು’ ಕಾರ್ಯಕ್ರಮ ಆರಂಭ!

By kannadanewsnow57

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅರಿವು ಕೇಂದ್ರಗಳಲ್ಲಿ, ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು “ಓದುವ ಬೆಳಕು” ಎಂಬ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಈ  ಕಾರ್ಯಕ್ರಮದ ಮೂಲಕ ಗ್ರಾಮೀಣ ಶಾಲಾ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದೆ. ನವೆಂಬರ್ 14ರ ಮಕ್ಕಳ ದಿನಾಚರಣೆ ಹಾಗೂ ನವೆಂಬರ್‌ 20ರ ಅಂತಾರಾಷ್ಟ್ರೀಯ ಮಕ್ಕಳ ದಿನಾಚರಣೆ ಅಂಗವಾಗಿ ಹಲವು ಚಟುವಟಿಕೆಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

ನವೆಂಬರ್ 14ರ ಮಕ್ಕಳ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುವುದು, ಈ ನಿಟ್ಟಿನಲ್ಲಿ ವಿಕೇಂದ್ರೀಕೃತ ವ್ಯವಸ್ಥೆಯ ಸ್ಥಳೀಯ ಸ್ವಯಂ ಆಡಳಿತ ಘಟಕವಾದ ಗ್ರಾಮ ಪಂಚಾಯತಿಗೆ  9 ಮತ್ತು 10ನೇ ತರಗತಿಯ 25 ವಿದ್ಯಾರ್ಥಿಗಳು ಒಬ್ಬ ಶಿಕ್ಷಕರೊಂದಿಗೆ  ಪ್ರವಾಸ ಕೈಗೊಂಡು ಅಧ್ಯಯನ ನಡೆಸಲು ಅವಕಾಶ ಕಲ್ಪಿಸಲಾಗುವುದು ಮತ್ತು “ಮಕ್ಕಳ ಪಂಚಾಯತ್” ಅರಿವಿನ ಹಬ್ಬವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.

‘ಮಕ್ಕಳ ಪಂಚಾಯತ್‘ ಅರಿವಿನ ಹಬ್ಬದ ರೂಪುರೇಷೆಗಳು ಈ ಕೆಳಗಿನಂತಿವೆ: 

➧ ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಗ್ರಾಮ ಪಂಚಾಯತಿಯ ಪ್ರದೇಶದಲ್ಲಿ  ಮಕ್ಕಳೊಂದಿಗೆ ಸಂವಾದ ನಡೆಸಿ ಗ್ರಾಮ ಪಂಚಾಯತಿ ಒದಗಿಸುತ್ತಿರುವ ಸೇವೆಗಳ ಬಗ್ಗೆ ವಿವರಿಸಲಾಗುವುದು ಮತ್ತು ಅರಿವು ಮೂಡಿಸಲಾಗುವುದು.

➧ ಮಕ್ಕಳಿಗೆ ಪ್ರಜಾಪ್ರಭುತ್ವ, 73ನೇ ಸಂವಿಧಾನ ತಿದ್ದುಪಡಿ, 3 ಹಂತದ ವಿಕೇಂದ್ರೀಕೃತ ವ್ಯವಸ್ಥೆ ಮತ್ತು ಸ್ಥಳೀಯ ಸ್ವಯಂ ಆಡಳಿತ ಘಟಕವಾಗಿ ಗ್ರಾಮ ಪಂಚಾಯತಿಯ ಕಾರ್ಯನಿರ್ವಹಣೆ ಬಗ್ಗೆ ವಿವರಿಸಲಾಗುವುದು.

➧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಯೋಜನೆಗಳ ಬಗ್ಗೆ ಪರಿಚಯ ಮಾಡಿಸಲಾಗುವುದು.

➧ ಮಹತ್ವಾಕಾಂಕ್ಷಿ ಯೋಜನೆಗಳಾದ ಅರಿವು ಕೇಂದ್ರ, ಕೂಸಿನ ಮನೆ, ಸ್ವ ಸಹಾಯ ಸಂಘಗಳಿಂದ ಘನ ತ್ಯಾಜ್ಯ ನಿರ್ವಹಣೆ ಮತ್ತು ಗ್ರಾಮ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಗುವುದು.

➧ ಮಕ್ಕಳಿಗೆ ಲಘು ಉಪಾಹಾರವನ್ನು ನೀಡಲಾಗುವುದು.

➧ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ‘ಮಕ್ಕಳ ಪಂಚಾಯತ್‘ ಅರಿವಿನ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಆಯಾ ಜಿಲ್ಲೆಗಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ತಿಳಿಸಲಾಗಿದೆ.

➧ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದೇಶನಗಳಂತೆ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ, ‘ಮಕ್ಕಳ ಪಂಚಾಯತ್‘ ಅರಿವಿನ ಹಬ್ಬವನ್ನು ಆಯೋಜಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ.

Another good news for school children in the state: 'Reading light' programme launched in awareness centres ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್‌ ನ್ಯೂಸ್‌ : ರಜೆ ದಿನಗಳಲ್ಲೂ ʻಬಿಸಿಯೂಟʼ ವಿತರಣೆ
Share. Facebook Twitter LinkedIn WhatsApp Email

Related Posts

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

1 Min Read

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

1 Min Read

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

1 Min Read
Recent News

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

State News
KARNATAKA

BREAKING: ಇಂದು ಸಂಜೆ ನಡೆಯಬೇಕಿದ್ದ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಕಾರ್ಯಕ್ರಮ ಮುಂದೂಡಿಕೆ | DK Shivakumar Oath

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಇಂದು ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ…

ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಸಿ ಎಐಸಿಸಿ ಆದೇಶ | Ex CM Siddaramaiah

BIG BREAKING: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ | Siddaramaiah

ನಾಳೆ ಡಿ.ಕೆ ಶಿವಕುಮಾರ್ ಅವರು ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಸಿಎಂ ಆಗಿ ಪದಗ್ರಹಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.