ಬೆಂಗಳೂರು: ಸಾಲಿಗೆ ವಕ್ಫ್ ನೋಂದಾಯಿತ/ ಸಂಘ ಕಾಯ್ದೆಯಡಿ ನೋಂದಾಯಿತ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ 13 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ಜೊತೆ 02 ವರ್ಷಗಳ ಕಾಲ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು (ಆನ್‍ಲೈನ್-ಆಪ್‍ಲೈನ್ ಕೋಚಿಂಗ್) ನೀಡಲು ಹಾಗೂ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ/ ಎನ್‍ಐಒಎಸ್, ದೂರ ಶಿಕ್ಷಣ ಮೂಲಕ ನೀಡುವುದಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರಾಜ್ಯದಲ್ಲಿರುವ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಮದರಸಾ ಸಂಸ್ಥೆಗಳಿಂದ ಅರ್ಜಿ ಸಲ್ಲಿಸಲು https://dom.karnataka.gov.in ಮೂಲಕ ಅರ್ಹ ನೋಂದಾಯಿತ ಮದರಸಾಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ.
ಮದರಸಾ ಸಂಸ್ಥೆಗಳು ರಾಜ್ಯದಲ್ಲಿ ವಕ್ಫ್ ನೋಂದಾಯಿತ/ ಇತರೆ ಸಂಘ ಸಂಸ್ಥೆ ಕಾಯ್ದೆಯಡಿ ನೋಂದಾಯಿತ ಮದರಸಾ ಸಂಸ್ಥೆಯಾಗಿರಬೇಕು. ಮದರಸಾದಲ್ಲಿ 40 ಅರ್ಹ ವಿದ್ಯಾರ್ಥಿಗಳಿರಬೇಕು. ಮದರಸಾಗಳು ತರಗತಿ ಕೊಠಡಿಗಳೊಂದಿಗೆ ವಸತಿ ಸೌಲಭ್ಯ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜನವರಿ, 20 ಕೊನೆಯ ದಿನವಾಗಿದೆ.