ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು.
ಕೆಲಸ ವಿರಾಮ ಸಮತೋಲನವನ್ನು ಸುಧಾರಿಸಲು ಹಾಗೂ ಸರ್ಕಾರಿ ನೌಕರರ ಕೆಲಸದ . ಗುಣಮಟ್ಟವನ್ನು ಹೆಚ್ಚಿಸಲು ವಾರದ ಐದು ದಿನಗಳ ಕೆಲಸದ ಅವಧಿಯನ್ನು ಪರಿಚಯಿಸಲು ಏಳನೇ ವೇತನ ಆಯೋಗದಲ್ಲಿ ಶಿಫಾರಸ್ಸು ಮಾಡಲಾಗಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರರ ಗುಣಮಟ್ಟ ಹೆಚ್ಚಿಸಲು ವಾರದಲ್ಲಿ ಐದು ದಿನ ಮಾತ್ರ ಕೆಲಸದ ಅವಧಿ ಇರಬೇಕು ಎಂದು ವರದಿಯಲ್ಲಿ ಶಿಫಾರಸ್ದು ಮಾಡಲಾಗಿದ್ದು, ಗರಿಷ್ಠ ವೇತನವನ್ನು 1.04, 600ರೂ.ಗಳಿಂದ 2.41, 200 ರೂ.ವರೆಗೆ ಹೆಚ್ಚಿಸಬೇಕು. ಹೊಸ ವೇತನ ಶ್ರೇಣಿಯನ್ನು 2022 ಜುಲೈನಿಂದಲೇ ಪೂರ್ವನ್ವಯ ಮಾಡಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.