ಸುಭಾಷಿತ :

Monday, February 24 , 2020 1:25 AM

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ


Monday, January 20th, 2020 6:36 am

ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಂತ ಹಂತವಾಗಿ ಡಾ.ಸ್ವಾಮಿನಾಥನ್ ವರದಿ ಜಾರಿಗೆ ತರುವ ಮೂಲಕ ರೈತರಿಗೆ ಬೆಂಬಲ ಬೆಲೆ ಯೋಜನೆಯಲ್ಲಿ ಹೆಚ್ಚಳ ಮಾಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಹೇಳಿದರು.

ಕೃಷಿಮೇಳ 2019-20 ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳ ಮತ್ತು ಕೃಷಿಭೂಮಿ ಪ್ರಮಾಣದ ಇಳಿಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ಇದನ್ನು ಸರಿದೂಗಿಸಲು ಜೇನುಸಾಗಣೆ,ಹೈನುಗಾರಿಕೆ ಸೇರಿದಂತೆ ಇತರ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಕೇಂದ್ರ ಸರ್ಕಾರ ದೇಶದ 6 ಕೋಟಿ ರೈತರಿಗೆ ನೆರವು ನೀಡುತ್ತಿದೆ ಎಂದರು.

ಧಾರವಾಡ ಕೃಷಿಮೇಳ ಈ ಭಾಗದ ಮಹತ್ವದ ಕಾರ್ಯಕ್ರಮವಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ಇಲ್ಲಿ ದೊರೆಯುತ್ತಿದೆ.ಒಟ್ಟಾರೆ ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆ ತರಲು ರಿಯಾಯಿತಿ ದರದ ಕಳ್ಳಸಾಗಣೆ ತಡೆದು, ಬೇವು ಲೇಪಿತ ಯೂರಿಯಾ ಉತ್ಪಾದನೆ ಮಾಡುವ ಮೂಲಕ ಕಳ್ಳಸಾಗಣೆಗೆ ಕಡಿವಾಣ ಹಾಕಲಾಗಿದೆ.ಇದರಿಂದ 80 ಸಾವಿರ ಕೋಟಿ ರೂ.ಉಳಿತಾಯವಾಗಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಧಾರವಾಡ ಜಿಲ್ಲೆಯ 1400 ಎಕರೆಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಸಣ್ಣ ಸಣ್ಣ ಯೋಜನೆಗಳ ಮೂಲಕ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಕುಟುಂಬಗಳು ಕೃಷಿಯೇತರ ಚಟುವಟಿಕೆಗಳನ್ನು ಕೈಗೊಳ್ಳಲು ಉತ್ತೇಜಿಸುವ ಯೋಜನೆಗಳನ್ನು ಭಾರತ ಸರ್ಕಾರ ರೂಪಿಸುತ್ತಿದೆ ಎಂದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions