2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ. ಬೆಳೆ ವಿಮೆ ನೊಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆದ್ರ್ರತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಠವನ್ನು ತೀರ್ಮಾನಿಸಲಾಗುವುದು.

2024ರ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು, ವಿಮಾ ಮೊತ್ತ ಹಾಗೂ ವಿಮಾ ಕಂತಿನ ವಿವರ ಇಂತಿದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.80000/- ವಿಮಾ ಮೊತ್ತ ನೀಡಲಾಗುವುದು. ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ ರೂ.4000, ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.127000/- ನೀಡಲಾಗುವುದು, ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ ರೂ.6350/- ಹಾಗೂ ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‍ಗೆ ರೂ.128000/- ರೈತರು 5 ಕಂತುಗಳಲ್ಲಿ ರೂ.6400/- ಬೆಳೆಗಳ ವಿಮೆಯನ್ನು ಬ್ಯಾಂಕ್‍ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರ ಆರ್ಥಿಕ ಸಂಸ್ಥೆಗಳಲ್ಲಿ ನೊಂದಣಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version