Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ ‘ದರ್ಖಾಸ್ತು ಪೋಡಿ’ ವಿತರಣೆ
KARNATAKA

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ ‘ದರ್ಖಾಸ್ತು ಪೋಡಿ’ ವಿತರಣೆ

By kannadanewsnow57

ಬೆಂಗಳೂರು: ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು. ರೈತರ ಈ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ದೃಢವಾದ ಹೆಜ್ಜೆ ಇಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯಲ್ಲಿ ಕಳೆದ ಒಂದು ವರ್ಷದಿಂದ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿ ಅಧಿಕಾರಿಗಳನ್ನು ಗುರುತಿಸಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಲಾಯಿತು. ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ವಾಸ್ತವದಲ್ಲಿ ರಾಜ್ಯಾದ್ಯಂತ ಎಷ್ಟು ಜನ ರೈತರ ಪೋಡಿ ಕೆಲಸ ಬಾಕಿ ಇದೆ ಎಂಬ ಮಾಹಿತಿಯಾಗಲಿ, ಅಂಕಿಸಂಖ್ಯೆಯಾಗಲಿ ಸರ್ಕಾರದ ಬಳಿ ಇಲ್ಲ. ಹಾಗಾಗಿ ಈ ವಿಚಾರದಲ್ಲಿ ಪ್ರಗತಿ ಕೆಲಸವೊಂದೇ ಬಾಕಿ ಇದ್ದು, ಸೆಪ್ಟೆಂಬರ್.2 ರಿಂದಲೇ ದರ್ಖಾಸ್ತು ಪೋಡಿ ಬಾಕಿ ಕೆಲಸ ಅಭಿಯಾನ ಮಾದರಿಯಲ್ಲಿ ಆರಂಭಿಸಲಾಗಿದೆ. ರೈತರ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಮಟ್ಟದಲ್ಲಿ ಕನಿಷ್ಟ 4 ಲಕ್ಷ ರೈತರಿಗೆ ಸಂಬಂಧಿಸಿದ 69,437 ಸರ್ವೇ ನಂಬರ್ಗಳಲ್ಲಿ ನಮೂನೆ 1-5 ದಾಖಲೆಗಳನ್ನು ಪರಿಶೀಲಿಸಲಾಗಿದೆ. ಅಂದರೆ ಸಂಬಂಧ ಪಟ್ಟ ರೈತರ ಕಡತಗಳನ್ನು ತಯಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ದಾಖಲೆಗಳನ್ನು ಒಂದುಗೂಡಿಸಿ ರೈತರು ಪೋಡಿಗೆ ಅರ್ಹರೇ ಎಂದು ಗುರುತಿಸಲಾಗುವುದು. ಆರ್ಐ, ಶಿರಸ್ತೇದಾರ್ ಹಾಗೂ ತಹಶೀಲ್ದಾರ್ ಈ ಬಗ್ಗೆ ಪರಿಗಣಿಸಿ ನಂತರ ನಮೂನೆ 6-10 ರ ಪ್ರಕ್ರಿಯೆಗೆ ಸರ್ವೇ ಇಲಾಖೆಗೆ ಪೋಡಿಗೆ ಶೀಫಾರಸು ಮಾಡುತ್ತಾರೆ. ತದನಂತರ ರೈತರಿಗೆ ಪೋಡಿ ಲಭ್ಯವಾಗುತ್ತದೆ” ಎಂದರು.

ರಾಜ್ಯಾದ್ಯಂತ ಪೋಡಿ ಅಭಿಯಾನ ಜಾರಿಗೊಳಿಸುವ ನಿಟ್ಟಿನಲ್ಲಿ ಹಾಸನ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು 8279 ಸರ್ಕಾರಿ ಸರ್ವೇ ನಂಬರ್ಗಳಲ್ಲಿ 80,000 ರೈತರಿಗೆ ಜಮೀನು ಮಂಜೂರು ಮಾಡಲಾಗಿದೆ. ಪರಿಣಾಮ ದುರಸ್ಥಿ ಕೆಲಸ ಸವಾಲಾಗಿದ್ದು, ಇದೀಗ ಅಕ್ಟೋಬರ್ನಿಂದ ಭೂಮಿ ಸರ್ವೇ ಕೆಲಸಗಳನ್ನು ಆರಂಭಿಸಲಾಗುವುದು. ಅಕ್ಟೋಬರ್ ಅಂತ್ಯದೊಳಗೆ ಕೆಲವರಿಗೆ ಪೋಡಿ ಮಾಡಿಕೊಡಲಾಗುವುದು. ಹಾಸನದಲ್ಲಿ 35,000 ರೈತರ ಬಳಿ ಸಂಪೂರ್ಣ ದಾಖಲೆ ಇದೆ. ಹೀಗಾಗಿ ಈ ವರ್ಷದಲ್ಲಿ ಕನಿಷ್ಟ 30,000 ರೈತರಿಗೆ ಪೋಡಿ ಮಾಡಿಕೊಡಲಾಗುವುದು. ಇದೇ ಮಾದರಿಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

Another good news for the farmers of the state: 'Darkhastu Podi' distributed despite having complete minimal records ಕನಿಷ್ಠ ದಾಖಲೆ ಹೊಂದಿದ್ದರೂ ‘ದರ್ಖಾಸ್ತು ಪೋಡಿ’ ವಿತರಣೆ ರಾಜ್ಯದ ರೈತರಿಗೆ ಮತ್ತೊಂದು ಗುಡ್‌ನ್ಯೂಸ್‌: 4 ಲಕ್ಷ ರೈತರ ಕೃಷಿ ಪಂಪ್ ಸೆಟ್‍ಗಳಿಗೆ ಮೂಲಭೂತ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.