ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಟರ್ಮ್ ಇನ್ಸೂರೆನ್ಸ್ ಜಾರಿಗೊಳಿಸಿದೆ. ಈಗ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಅದೇ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದಿಸಲಾಗಿದೆ.
ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆಗಾಗಿ ಮಾಸಿಕ ಕುತಂಗಳಲ್ಲಿ ಸಿಬ್ಬಂದಿಗಳಿಂದ 100 ರೂಪಾಯಿ ಸಂಗ್ರಹಿಸಲು ಒಪ್ಪಿಗೆ ಸೂಚಿಸಿದೆ.
ಆರೋಗ್ಯ ಇಲಾಖೆಯ ಖಾಯಂ ಹಾಗೂ ಗುತ್ತಿಗೆ ಸಿಬ್ಬಂದಿ ಹಾಗೂ ಅವರ ಅವಲಂಬಿತರಿಗೆ ಈ ಯೋಜನೆಯ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಇನ್ಮುಂದೆ ಐದು ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ದೊರೆತಂತೆ ಆಗಲಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
BREAKING: ಬೆಂಗಳೂರು ಹಾಲು ಒಕ್ಕೂಟದ(BAMUL) ನೂತನ ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಆಯ್ಕೆ
BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ