ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳನ್ನು ನೀಡಿ, ಜನತೆಗೆ ಅನುಕೂಲ ಮಾಡಿಕೊಡಲಾಗಿದೆ. ಈಗ ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಲಯಗಳ ಬಳಿಯಲ್ಲೇ ಟ್ರಾಮ್ ಸೆಂಟರ್ ತೆರೆಯಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.
ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.
ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು.
‘ಜೋಗದ ಜಲಪಾತ’ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್: 2 ಗಂಟೆ ಸಮಯ ನಿಗದಿ, ಶುಲ್ಕವೂ ಹೆಚ್ಚಳ
BREAKING : `CM ಸಿದ್ದರಾಮಯ್ಯ’ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು : ಬಿ.ವೈ ವಿಜಯೇಂದ್ರ