ಬೆಂಗಳೂರು : ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ ನಿರ್ಮಿಸಲಾಗುತ್ತಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಎಂ.ಬಿ.ಪಾಟೀಲ್, ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲು ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ ನಿರ್ಮಿಸಲಾಗುತ್ತಿದೆ. ಇಲ್ಲಿ 150 ಮೀಟರ್ ಅಗಲದ ಸಂಪರ್ಕ ರಸ್ತೆ ಒಳಗೊಂಡ ವಿಶ್ವದರ್ಜೆಯ ಸೌಲಭ್ಯಗಳು, ವಸತಿ ವ್ಯವಸ್ಥೆ, ಶಾಲೆಗಳು ಇರುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.