ಬೆಂಗಳೂರು: ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಕನಿಷ್ಠ ವೇತನ ನಿಗದಿಪಡಿಸಲಾಗಿದೆ. ‘ಅರಿವು ಕೇಂದ್ರ’ಗಳ ಕೆಲಸದ ಸಮಯವನ್ನು ದಿನಕ್ಕೆ 6 ರಿಂದ 8 ಗಂಟೆಗಳಿಗೆ ಏರಿಸಿ ಗ್ರಂಥಾಲಯ ಮೇಲ್ವಿಚಾರಕರಿಗೆ ರೂ. 16,382 ರೂ. ಮಾಸಿಕ ಕನಿಷ್ಠ ವೇತನ ಮತ್ತು 1542 ರೂ. ವ್ಯತ್ಯಯವಾಗುವ ತುಟ್ಟಿ ಭತ್ಯೆ ಸೇರಿಸಿ, ಮಾಸಿಕ 17,924 ರೂ. ಪಾವತಿಸಲಾಗುತ್ತಿದೆ. ಗ್ರಂಥಾಲಯ ಮೇಲ್ವಿಚಾರಕರಿಗೆ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವತಿಯಿಂದ 6 ತಿಂಗಳ ಸರ್ಟಿಫಿಕೇಟ್ ಕೋರ್ಸ್ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.
ಓದುವ ಬೆಳಕು
ಓದುವ ಬೆಳಕು’ ಕಾರ್ಯಕ್ರಮದಡಿ 6 ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವವನ್ನು ನೀಡಿ ಮನೆಗೆ ಪುಸ್ತಕಗಳನ್ನು ತೆಗೆದುಕೊಂಡು ಹೋಗಿ ಓದಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಒಟ್ಟು 48,57,351 ಮಕ್ಕಳು ನೋಂದಣಿಯಾಗಿದ್ದಾರೆ.
ವಿವಿಧ ಚಟುವಟಿಕೆಗಳು
ಮಕ್ಕಳ ಸ್ನೇಹಿಯಾಗಿಸಲು ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ, ಗಟ್ಟಿ ಓದು, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ ಬರೆಯುವ ಅಭಿಯಾನ, ಚಿಣ್ಣರ ಚಿತ್ತಾರ, ನಿಮ್ಮ ಗೆಳೆಯರನ್ನು ಗ್ರಂಥಾಲಯಕ್ಕೆ ಕರೆತನ್ನಿ. ಮಕ್ಕಳಿಗೆ ಬೇಸಿಗೆ ಶಿಬಿರ, ಸಣ್ಣ ಕಥೆ ಬರೆಯುವುದು, ನಾನು ಓದುವ ಪುಸ್ತಕಗಳು, ನನ್ನ ಪ್ರೀತಿಯ ಗ್ರಂಥಾಲಯ, ವಾರ್ತಾ ಪತ್ರಿಕೆ ಓದೋಣ ಮುಂತಾದ ಹಲವಾರು ಅಭಿಯಾನಗಳನ್ನು ಕೈಗೊಳ್ಳಲಾಗಿದೆ.
ಕಟ್ಟಡದ ಮಾದರಿ ವಿನ್ಯಾಸ
‘ಅರಿವು ಕೇಂದ್ರ’ ಗಳನ್ನು ಮತ್ತಷ್ಟು ಬಲಪಡಿಸಲು ಸ್ವಂತ ನಿವೇಶನ ಹೊಂದಿರುವ ಕಡೆ ಸುಸಜ್ಜಿತ ಕಟ್ಟಡ ನಿರ್ಮಾಣವನ್ನು 34.60 ಲಕ್ಷ ರೂ. ವೆಚ್ಚದ ಕಟ್ಟಡ ಮಾದರಿ ವಿನ್ಯಾಸ ಸಿದ್ಧಪಡಿಸಲಾಗಿದೆ. ಸಾಂಕೇತಿಕವಾಗಿ ಬೆಂಗಳೂರು ನಗರ ಜಿಲ್ಲೆಯ ದೊಡ್ಡಜಾಲ ಗ್ರಾಮ ಪಂಚಾಯತಿ ‘ಅರಿವು ಕೇಂದ್ರ’ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸವನ್ನು ಇಂದು ಇಂದು ನೆರವೇರಿಸಲಾಗುತ್ತಿದೆ.
ಉತ್ತಮ ಸೇವೆಗಳನ್ನು ಒದಗಿಸಲು ಹಣಕಾಸು ಹೊರೆಯಿಲ್ಲದಂತೆ ಒಡಂಬಡಿಕೆಗಳು
ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ದಾಖಲಾದ ಎಲ್ಲರಿಗೂ ವೃತ್ತಿಪರ ಮತ್ತು ಶೈಕ್ಷಣಿಕ ಕೋರ್ಸ್ಗಳಿಗೆ ಸಂಬಂಧಿಸಿದ ಕಲಿಕಾ ಸಂಪನ್ಮೂಲಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ಶಾಲೆ ಬಿಟ್ಟ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು, ಯುವಜನತೆಗೆ, ವಯಸ್ಕರಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಮುಕ್ತ ಶಾಲೆಯ ಅವಕಾಶವನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಸಂಸ್ಥೆಯಿಂದ ನೀಡಲಾಗುತ್ತಿದ್ದು ಇಲಾಖೆಯಿಂದ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಚಾಮರಾಜನಗರ ಜಿಲ್ಲೆಯ 10 ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಹಿರಿಯ ನಾಗರಿಕರ ಸ್ವಾಸ್ಥ್ಯ ಕುರಿತಾದ ಚಟುವಟಿಕೆಗಳಾದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆ, ಸಾಮಾಜಿಕ ಒಡನಾಟ ಪ್ರಕ್ರಿಯೆಗಳನ್ನು ಸತ್ಯ ಎಜ್ಯುಕೇರ್ ಕಾಂಪಿಟೆನ್ಸಿ ಟ್ರಸ್ಟ್ ಸಂಸ್ಥೆಯ ವತಿಯಿಂದ ಕೈಗೊಳ್ಳಲಾಗುತ್ತಿದೆ.
Adhyayan Foundation, Children’s Movement for Civic Awareness & Nature Conservation Foundation ವತಿಯಿಂದ ಗ್ರಾಮ ಪಂಚಾಯತಿ ಮೇಲ್ವಿಚಾರಕರ ಸಾಮಾರ್ಥ್ಯಾಭಿವೃದ್ಧಿ ತರಬೇತಿಯನ್ನು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಸಹಯೋಗದಲ್ಲಿ ಇದನ್ನು ನಡೆಸಲಾಗುವುದು.
ಇಲಾಖೆಯಿಂದ ಎನ್ಎಸ್ಎಸ್ ರಾಜ್ಯ ಘಟಕ ಮತ್ತು ಆಕಾಂಕ್ಷ ಚಾರಿಟಬಲ್ ಟ್ರಸ್ಟ್ ಸಹಯೋಗದೊಂದಿಗೆ ‘ಗ್ರಂಥ ಮಿತ್ರ’ ಕಾರ್ಯಕ್ರಮವನ್ನು ಅನುಷ್ಠಾನಿಸಲಾಗುತ್ತಿದ್ದು, ಭಾಷಾ ಚಟುವಟಿಕೆ, ಇಂಗ್ಲೀಷ್ ಪ್ರಾವೀಣ್ಯತೆ ಗಣಿತ ಮತ್ತು ಕಲೆ, ವೃತ್ತಿ ಮಾರ್ಗದರ್ಶನ ಮತ್ತು ವಿಮರ್ಶಾತ್ಮಕ ಚಿಂತನೆ ಕುರಿತಂತೆ ಒತ್ತು ನೀಡಲಾಗುತ್ತಿದೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 70 ಗ್ರಾಮ ಪಂಚಾಯತಿಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ 12 ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಸಂವಹನ ಕೌಶಲ್ಯಗಳು, ಆರೋಗ್ಯ ತಂತ್ರಜ್ಞಾನ ಜಾಗೃತಿ, ಕಾನೂನು ಸಾಕ್ಷರತೆ, ವ್ಯಕ್ತಿತ್ವ ವಿಕಸನ ಇತ್ಯಾದಿಗಳ ಕುರಿತಂತೆ ಪರಿಣಿತರಿಂದ ಉಪನ್ಯಾಸ ನೀಡಲಾಗುವುದು.
ರೋಟರಿ ಜಿಲ್ಲೆ 3191 ಸಹಯೋಗದಲ್ಲಿ ರಾಜ್ಯಾದ್ಯಂತ ಮೃದು ಕೌಶಲ್ಯ ಮತ್ತು ಸಾಕ್ಷರತೆ ಅಭಿವೃದ್ಧಿ ಕಾರ್ಯಕ್ರಮವನ್ನು Rural Digital Library Mission ಉದ್ದೇಶದೊಂದಿಗೆ ಅನುಷ್ಠಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಳೆಯಿಂದಾಗಿ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶ: ಸಚಿವ ಕೃಷ್ಣಭೈರೇಗೌಡ
ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ‘ಸೆಪ್ಟೆಂಬರ್’ನಿಂದ ‘ಲ್ಯಾಂಡ್ ಬೀಟ್ ಆ್ಯಪ್’ ಆಧರಿಸಿ ತೆರವು ಆರಂಭ