ಬೆಂಗಳೂರು: ರಾಜ್ಯ ಸರ್ಕಾರದಿಂದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯುವಂತ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿಗೊಂಡಿದ್ದಂತ ಯೋಜನೆಯನ್ನು ಮಾರ್ಚ್ ನಿಂದ ರಾಜ್ಯಾಧ್ಯಂತ ವಿಸ್ತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.
ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಅವರು, ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಆರೋಗ್ಯ ಸೇವೆಗಳನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗುವತ್ತ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಸಾಮಾನ್ಯ, ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಸರ್ವ ಪ್ರಯತ್ನ ನಡೆಯುತ್ತಿದೆ. ಇದೇ ನಿಟ್ಟಿನಲ್ಲಿ ಕೋಲಾರದಲ್ಲಿ ಯಶಸ್ವಿಯಾಗಿರುವ ಗೃಹ ಆರೋಗ್ಯ ಯೋಜನೆಯನ್ನು ಮಾರ್ಚ್… pic.twitter.com/5XxOIZSRix
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 1, 2025
ಏನಿದು ಗೃಹ ಆರೋಗ್ಯ ಯೋಜನೆ?
ಗೃಹ ಆರೋಗ್ಯ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.
ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ನೀಡಲು ಆರೋಗ್ಯ ಇಲಾಖೆಯು ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೆ ತರುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರಾರಂಭಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿ ಮಾಡಲಾಗಿತ್ತು. ಈಗ ಮಾರ್ಚ್ ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತಿದೆ.
ಗೃಹ ಆರೋಗ್ಯ ಯೋಜನೆಯಡಿ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು
ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳು
ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ ವಿನೂತನ ಯೋಜನೆ
ಮಧುಮೇಹ, ಅಧಿಕ ರಕ್ತದೊತ್ತಡ ಸಂಬಂಧ ಪರೀಕ್ಷೆ
ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸ೦ಬ೦ಧಿಸಿದಂತೆ ಪ್ರಾಥಮಿಕ ಹಂತದ ತಪಾಸಣೆ
ಆರೋಗ್ಯ ಕಾರ್ಯಕರ್ತರ ತಂಡದಿಂದ ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರ ಮನೆಗಳಿಗೆ ಭೇಟಿ
ಸಾರ್ವಜನಿಕರ ಆರೋಗ್ಯ ತಪಾಸಣೆ ಮತ್ತು ದಾಖಲಾತಿ
ಅವಶ್ಯಕತೆ ಇರುವವರಿಗೆ ಉಚಿತ ಔಷಧ ವಿತರಣೆ
ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷಧಿಗಳ ವಿತರಣೆ
ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ನಿರಂತರ ಉಚಿತ ತಪಾಸಣೆ
ಅಗತ್ಯವಿರುವವರಿಗೆ ಮುಂದಿನ ಹಂತದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ಚಿಕಿತ್ಸೆ
ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಸಚಿವ ಎಂ.ಬಿ ಪಾಟೀಲ
‘BMTC ನೌಕರ’ರಿಗೆ ಗುಡ್ ನ್ಯೂಸ್: 1.50 ಕೋಟಿ ‘ಅಪಘಾತ ವಿಮಾ ಪರಿಹಾರ’ಕ್ಕೆ ಸರ್ಕಾರ ಒಡಂಬಡಿಕೆ