ಬೆಂಗಳೂರು: ರಾಜ್ಯದ ಜನತೆಗೆ ಮತ್ತಷ್ಟು ಆರೋಗ್ಯ ಸೇವೆಯನ್ನು ಒದಗಿಸೋ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, 8 ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರೋ ರೋಗಿಗಳಿಗೆ ಮನೆ ಬಾಗಿಲಲ್ಲೇ ನೇತ್ರ ಚಿಕಿತ್ಸೆ ದೊರೆಯುವಂತೆ ಆಗಲಿದೆ.
ಇಂದು ಆರೋಗ್ಯ ಸೇವೆಗಳು ಲಭ್ಯವಿಲ್ಲದ ಗ್ರಾಮೀಣ, ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ (NPCB&V) 8 ‘ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ’ ಲೋಕಾರ್ಪಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಫೆಬ್ರವರಿ 13, ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಆರೋಗ್ಯ ಸೌಧದ ಮುಂಭಾಗದಲ್ಲಿ ನೆರವೇರಿಸಲಿದ್ದಾರೆ.
ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸಾರ್ವಜನಿಕರ ಕಣ್ಣಿನ ಪ್ರಾಥಮಿಕ ತಪಾಸಣೆ ನಡೆಸಲು ಅಗತ್ಯವಾದ ಉಪಕರಣಗಳನ್ನು ಒಳಗೊಂಡಿರುವ ಈ ವಾಹನದಲ್ಲಿ ಓರ್ವ ನೇತ್ರ ತಜ್ಞರು, ಪ್ಯಾರಾ ಮೆಡಿಕಲ್ ನೇತ್ರ ಸಹಾಯಕ (PMOA), ಬ್ಲ್ಯಾಕ್ ಹೆಲ್ತ್ ಎಜುಕೇಶನ್ ಆಫೀಸರ್ (BHEO), ಸ್ಕ್ಯಾಫ್ ನರ್ಸ್ ಇರಲಿದ್ದಾರೆ, ಪ್ರತಿ ವಾಹನವು 15 ರೋಗಿಗಳನ್ನು ಸಮೀಪದ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.
ಉದ್ದೇಶಗಳು
-ಸಂಚಾರಿ ನೇತ್ರ ಚಿಕಿತ್ಸಾ ಘಟಕದ ಕಾರ್ಯಚಾರಣೆಯ ಮೂಲಕ ಜಿಲ್ಲಾ ಆಸ್ಪತ್ರೆಗಳಲ್ಲಿ ಕಣ್ಣಿನ ಆರೈಕೆ ಸೇವಗಳನ್ನು ಹೆಚ್ಚಿಸುವುದು
– ಕಣ್ಣಿನ ಆರೈಕೆಯ ಸೇವಗಳನ್ನು ಹೆಚ್ಚಿನ ಪ್ರದೇಶ, ಸಮುದಾಯಗಳಿಗೆ ವಿಸ್ತರಿಸುವುದು
-ರಾಜ್ಯದ ಹಿಂದುಳಿದ ಪ್ರದೇಶ ಮತ್ತು ಬುಡಕಟ್ಟು ಪ್ರದೇಶಗಳಿಗೆ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವುದು
ಸಂಚಾರಿ ನೇತ್ರ ಚಿಕಿತ್ಸಾ ಘಟಕದ ಪ್ರಮುಖ ಚಟುವಟಿಕೆಗಳು
-ಕಣ್ಣಿನ ಪೊರೆ, ಡಯಾಬಿಟಿಕ್ ರೆಟಿನೋಪತಿ, ಗ್ಲುಕೋಮಾ, ಕಾರ್ನಿಯ ಅಸ್ಪಷ್ಟತೆ ಮುಂತಾದ ಸಮಸ್ಯೆಗಳ ತಪಾಸಣೆ ಮತ್ತು ರೋಗನಿರ್ಣಯ.
-ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳ ಶಿಕ್ಷಕರ ಕಣ್ಣಿನ ತಪಾಸಣೆ
-ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ಸೀನಿಂಗ್ ಸೆಂಟರ್‌ಗಳಿಂದ ಹತ್ತಿರದ ಜಿಲ್ಲಾ ಆಸ್ಪತ್ರೆ/ರೆಫರಲ್ ಸೆಂಟರ್‌ಗೆ ಕರೆದೊಯ್ಯುವುದು.
-ಸ್ಥಳದಲ್ಲೇ ತಪಾಸಣೆ ಮತ್ತು ಅಗತ್ಯವಿರುವವರಿಗೆ ಕನ್ನಡಕಗಳನ್ನು ಒದಗಿಸಲು ಸೂಚನಾ ಪತ್ರಗಳ ವಿತರಣೆ
-ಆಡಿಯೋ, ವಿಡಿಯೋ ಮತ್ತು ಪೋಸ್ಟರ್ ಪ್ರದರ್ಶನಗಳ ಮೂಲಕ ಮಾಹಿತಿ, ಶಿಕ್ಷಣ ಮತ್ತು ಸಂವಹನ (IEC) ಜಾಗೃತಿ.
ಅಂಧತ್ವ ನಿಯಂತ್ರಣ ವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ (DLO) ಜಿಲ್ಲಾ ಮಟ್ಟದಲ್ಲಿ ಮೊಬೈಲ್ ಘಟಕದ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ, ಶಿಬಿರ ನಡೆಯುವ ದಿನ, ಸ್ಥಳ ಸೇರಿದಂತೆ ಎಲ್ಲಾ ಮಾಹಿತಿಗಳನ್ನು DLO ಅವರು ಸಂಬಂಧಪಟ್ಟ ಸಿಬ್ಬಂದಿಗೆ ಮುಂಚಿತವಾಗಿ ತಿಳಿಸುತ್ತಾರೆ.
ನೇತ್ರ ತಪಾಸಣಾ ಶಿಬಿರದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಜರಿದ್ದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ವೈದ್ಯರ ಜೊತೆಗೆ ಸ್ಥಳೀಯ ಉಪ ಕೇಂದ್ರದ ಸಿಬ್ಬಂದಿ ಮತ್ತು ಗ್ರಾಮ ಆರೋಗ್ಯ ಸಮಿತಿಯ ಸದಸ್ಯರು ಶಿಬಿರಗಳನ್ನು ಆಯೋಜಿಸಲು ಸಹಾಯ ಮಾಡಲಿದ್ದಾರೆ.
ಪ್ರಸ್ತುತ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಹಾಸನ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೀದರ್, ಬಳ್ಳಾರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ, ಕಲಬುರಗಿ ಮತ್ತು ಧಾರವಾಡ ಸೇರಿದಂತೆ 17 ಜಿಲ್ಲೆಗಳಲ್ಲಿ ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ.
ಪ್ರಸಕ್ತ ವರ್ಷ ದಾವಣಗೆರೆ, ಮಂಡ್ಯ, ಮೈಸೂರು ಸೇರಿದಂತೆ ಹೆಚ್ಚುವರಿಯಾಗಿ 8 ಜಿಲ್ಲೆಗಳಿಗೆ ಸಂಚಾರಿ ಘಟಕದ ಸೇವೆಗಳು ಲಭ್ಯವಾಗಲಿದೆ. ಗ್ರಾಮೀಣ ಮತ್ತು ನಗರದ ಪ್ರದೇಶದಿಂದ ದೂರದಲ್ಲಿರುವ ಪ್ರದೇಶಗಳಿಗೆ ಕಣ್ಣಿನ ಆರೈಕೆ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲು ಈ ಸಂಚಾರಿ ಘಟಕಗಳು ನೆರವಾಗಲಿದೆ.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಆಯುಕ್ತರಾದ ಡಿ. ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ನಿರ್ದೇಶಕರಾದ ಡಾ. ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಪುಷ್ಪಲತಾ B.S, ಡಾ. G. N. ಶ್ರೀನಿವಾಸ, ಯೋಜನಾ ನಿರ್ದೇಶಕರು (R.C.H), ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ಗೌರವಧನ 5 ಸಾವಿರದಿಂದ ‘7 ಸಾವಿರ’ಕ್ಕೆ ಹೆಚ್ಚಳ, ‘ಉಚಿತ ಮೊಬೈಲ್’
‘ಖಾಯಂ ನಿರೀಕ್ಷೆ’ಯಲ್ಲಿದ್ದ ‘ಅತಿಥಿ ಉಪನ್ಯಾಸಕ’ರಿಗೆ ಬಿಗ್ ಶಾಕ್: ‘ಸೇವೆ ಖಾಯಂ’ ಇಲ್ಲ – ‘ರಾಜ್ಯ ಸರ್ಕಾರ’ ಸ್ಪಷ್ಟನೆ