ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದು, ಹಠಾತ್ ಹೃದಯಾಘಾತ ತಡೆದು ಜೀವದಾನ ನೀಡುವ ಡಾ। ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಈ ವರ್ಷವೇ ಯೋಜನೆ ವಿಸ್ತರಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಈಗಾಗಲೇ ಆಯ್ದ ಜಿಲ್ಲೆಗಳಲ್ಲಿ ಆರಂಭಿಸಲಾಗಿತ್ತು. ಇದೀಗ ಯೋಜನೆ ಯಶಸ್ಸು ಕಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಎದೆನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ 6 ನಿಮಿಷದೊಳಗೆ ಅವರ ಪರಿಸ್ಥಿತಿ ಹೇಗಿದೆ ಎಂಬುದನ್ನು ಎಐ ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾಗುತ್ತದೆ.
ಟ್ರಿಕಾಗ್ ಸಂಸ್ಥೆಯವರು ಎಐ ತಂತ್ರಜ್ಞಾನದ ಮೂಲಕ ಮೇಲ್ವಿಚಾರಣೆ ನಡೆಸಿ, ಎದೆನೋವು ಕಾಣಿಸಿಕೊಂಡವರ ಇಸಿಜಿ ಪರೀಕ್ಷೆಯಲ್ಲಿ ತೀವ್ರ ಹೃದಯಾಘಾತವಾಗುವ ಮುನ್ಸೂಚನೆಯನ್ನು ನೀಡುತ್ತಾರೆ. ಕ್ಲಿಷ್ಟಕರ ಎಂದು ಖಚಿತವಾದ ತಕ್ಷಣವೇ ಟೆನೆನ್ಸೆಪ್ಲೇಸ್ ಇಂಜೆಕ್ಷನ್ ನೀಡಲಾಗುತ್ತದೆ. ಈ ಇಂಜೆಕ್ಷನ್ ನೀಡಿದರೆ ಕನಿಷ್ಠ 1-2 ದಿನ ಜೀವದಾನ ಉಂಟಾಗುತ್ತದೆ. ಬಳಿಕ ಉನ್ನತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಜೀವ ಉಳಿಸಿಕೊಳ್ಳಬಹುದು.