Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪವಿತ್ರ ಗಂಗಾ ನದಿ’ಯಲ್ಲೇ ಇಫ್ತಾರ್ ಕೂಡ, ಬಿರಿಯಾನಿ ಪಾರ್ಟಿ: ಧಾರ್ಮಿಕ ಭಾವನೆಗೆ ಧಕ್ಕೆ ತಂದ 14 ಮಂದಿ ಅರೆಸ್ಟ್!

18/03/2026 5:12 PM

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

18/03/2026 4:46 PM

BREAKING : ಚೀನಾಕ್ಕೆ ತೆರಳುತ್ತಿದ್ದ 7 ರಷ್ಯಾದ ‘ತೈಲ ಟ್ಯಾಂಕರ್’ಗಳು ಯು-ಟರ್ನ್, ಭಾರತದತ್ತ ಆಗಮನ

18/03/2026 4:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’
KARNATAKA

ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’

By kannadanewsnow0918/10/2025 2:37 PM

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬ ಮಹತ್ತರ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ʼಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದುʼ ಎಂದು ಘೋಷಿಸಲಾಗಿತ್ತು.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199(ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ. ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು ಎಂದೂ  ಹೇಳಿದ್ದಾರೆ.

ಗ್ರಾಮ ಪಂಚಾಯಿತಿಯ ಎಲ್ಲಾ ಆಸ್ತಿಗಳ ಕರಡು ಪ್ರತಿಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕ ಒದಗಿಸಿ ತಮ್ಮ ಆಸ್ತಿಗಳ ಮಾಹಿತಿಯನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ, ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಗ್ರಾಮ ಪಂಚಾಯಿತಿಗೆ ಪಾವತಿಸುವ ಮೂಲಕ ದಾಖಲೆ ಪಡೆಯಲು ಹಾಗೂ ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ದಿಗೊಳಿಸುವುದರ ಮೂಲಕ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧರಣೆ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ(ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ಹೇಳಿದ್ದಾರೆ.

ಮಹತ್ತರ ಹಾಗೂ ಐತಿಹಾಸಿಕ ನಡೆ

ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ತೆರಿಗೆ, ದರ ಹಾಗು ಶುಲ್ಕಗಳನ್ನು ನಿಗದಿ ಮಾಡುವುದರಿಂದ ಮತ್ತು ಪರವಾನಗಿ, ನಿರಾಕ್ಷೇಪಣ ಪತ್ರಗಳನ್ನು ಕ್ರಮಬದ್ಧವಾಗಿ ಮತ್ತು ಕಾಲಮಿತಿಯೊಳಗೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ನೀಡುವುದರಿಂದ ಗ್ರಾಮ ಪಂಚಾಯಿತಿಗಳ ಸ್ವಂತ ಸಂಪನ್ಮೂಲದ ಹೆಚ್ಚಳಕ್ಕೆ ಕಾರಣವಾಗುವದಲ್ಲದೆ ಸ್ವಯಂ ಸರ್ಕಾರಗಳಾಗಿ ಗ್ರಾಮ ಪಂಚಾಯತಿಗಳು ತಮ್ಮ ಅಭಿವೃದ್ಧಿಯನ್ನು ತಾವೇ ನಿರ್ಧರಿಸುವ ದಿಸೆಯಲ್ಲಿ ಇದೊಂದು ಮಹತ್ತರ ಹಾಗೂ ಐತಿಹಾಸಿಕ ನಡೆಯಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

BREAKING: ದೆಹಲಿಯ ಸಂಸದರ ಅಪಾರ್ಟ್ಮೆಂಟ್ ನಲ್ಲಿ ಭಾರಿ ಅಗ್ನಿ ಅವಘಡ | Massive fire

Share. Facebook Twitter LinkedIn WhatsApp Email

Related Posts

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

18/03/2026 4:46 PM2 Mins Read

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಿ: ವಿಧಾನಸಭೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಆಗ್ರಹ

18/03/2026 4:40 PM5 Mins Read

ಚಿಕ್ಕಮಗಳೂರು : ಕೋಮು ಪ್ರಚೋದನೆ ಆರೋಪ : ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ಆದೇಶ

18/03/2026 4:38 PM1 Min Read
Recent News

‘ಪವಿತ್ರ ಗಂಗಾ ನದಿ’ಯಲ್ಲೇ ಇಫ್ತಾರ್ ಕೂಡ, ಬಿರಿಯಾನಿ ಪಾರ್ಟಿ: ಧಾರ್ಮಿಕ ಭಾವನೆಗೆ ಧಕ್ಕೆ ತಂದ 14 ಮಂದಿ ಅರೆಸ್ಟ್!

18/03/2026 5:12 PM

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

18/03/2026 4:46 PM

BREAKING : ಚೀನಾಕ್ಕೆ ತೆರಳುತ್ತಿದ್ದ 7 ರಷ್ಯಾದ ‘ತೈಲ ಟ್ಯಾಂಕರ್’ಗಳು ಯು-ಟರ್ನ್, ಭಾರತದತ್ತ ಆಗಮನ

18/03/2026 4:42 PM

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಿ: ವಿಧಾನಸಭೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಆಗ್ರಹ

18/03/2026 4:40 PM
State News
KARNATAKA

ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

By kannadanewsnow0918/03/2026 4:46 PM KARNATAKA 2 Mins Read

ಬೆಂಗಳೂರು:  ಕೊಡಗು ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ತೋಡಲಾಗಿರುವ ಆನೆ ಕಂದಕ ಮತ್ತು ಅಳವಡಿಸಿರುವ ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಿ: ವಿಧಾನಸಭೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಆಗ್ರಹ

18/03/2026 4:40 PM

ಚಿಕ್ಕಮಗಳೂರು : ಕೋಮು ಪ್ರಚೋದನೆ ಆರೋಪ : ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ಆದೇಶ

18/03/2026 4:38 PM

ಹೆಚ್.ವೈ ಮೇಟಿ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ : ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್

18/03/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.