ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ.
ಕೇಂದ್ರ ಸರ್ಕಾರ ಶುಕ್ರವಾರ ವಿವಿಧ ರಾಜ್ಯಗಳಿಗೆ 1.73 ಲಕ್ಷ ಕೋಟಿ ರೂ. ತೆರಿಗೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ 6310.40 ಕೋಟಿ ರೂ. ಬಿಡುಗಡೆ ಮಾಡಿದೆ.
ಡಿಸೆಂಬರ್ ತಿಂಗಳಲ್ಲಿ 28 ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 89,086 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. ಬದಲಾಗಿ ರಾಜ್ಯ ಸರ್ಕಾರಗಳಿಗೆ 1,73,030 ಕೋಟಿ ರೂ. ತೆರಿಗೆ ಹಂಚಿಕೆ ಪಾಲು ನೀಡಿದೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.
ರಾಜ್ಯಗಳು ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳಿಗೆ ಆರ್ಥಿಕ ನೆರವು ಒದಗಿಸಲು ಈ ತಿಂಗಳು ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದ
15ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ ಸಂಗ್ರಹಿಸುವ ತೆರಿಗೆಯಲ್ಲಿ ಶೇಕಡ 41ರಷ್ಟನ್ನು ಒಂದು ಆರ್ಥಿಕ ವರ್ಷದಲ್ಲಿ ರಾಜ್ಯಗಳ ನಡುವೆ ಕಂತುಗಳಲ್ಲಿ ಕೇಂದ್ರ ಸರ್ಕಾರವು ವಿತರಿಸುತ್ತದೆ. ಈ ಮೂಲಕ ಕರ್ನಾಟಕಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ 6310 ಕೋಟಿ ರೂ. ಹಂಚಿಕೆ ಮಾಡಲಾಗಿದೆ.