ಬೆಂಗಳೂರು: ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ದಿಗೋಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಉದ್ದಿಮೆದಾರರಿಗಾಗಿ ಗೃಹಲಕ್ಷ್ಮೀ ಡಿಜಿಟಲ್ ವೇದಿಕೆಯ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಜನವರಿ 9,2026ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೇಟಿಂಗ್ ಆ್ಯಪ್‍ಅನ್ನು ಲಾಂಚ್ ಮಾಡಲಾಗಿರುತ್ತದೆ.
ಆ್ಯಪ್‍ನಲ್ಲಿ ಮಹಿಳಾ ಉದ್ದಿಮಿಗಳ ನೋಂದಣಿ ಕಾರ್ಯಕೈಗೊಳ್ಳಲು ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಿನ ‘ವಿಮೆ ಹಣ’ ವರ್ಗಾಯಿಸದ ವಿಮಾ ಕಂಪನಿಗೆ 25,000 ದಂಡ ವಿಧಿಸಿದ ಕೋರ್ಟ್
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜೊತೆಗೆ ಚರ್ಚೆ- HDK








