ಬೆಂಗಳೂರು: ನಾಗರಹೊಳೆಯ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿಗೆ ತೆರಳುವಂತ ಪ್ರವಾಸಿಗರಿದೆ ಮತ್ತೊಂದು ಗುಡ್ ನ್ಯೂಸ್ ಅನ್ನು ಸಚಿವ ಈಶ್ವರ್ ಖಂಡ್ರೆ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ.
ವಿಧಾನಸೌಧದ ಮುಂಭಾಗದಲ್ಲಿಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಮೂರು ಸುಸಜ್ಜಿತ ಮಿನಿ ಬಸ್ ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. 1655585 ರೂ.ಗಳಿಗೆ ಮಿನಿ ಬಸ್ ಛಾಸಿ ಖರೀದಿಸಲಾಗಿದ್ದು, ರಮೇಶ್ ಗೋವಿಂದನ್ ನೀಡಿರುವ 1481590 ರೂ. ಮತ್ತು ಕೊಯಮತ್ತೂರಿನ ಹರೀ ಶಾಂತಾರಾಮ್ ಅವರು ನೀಡಿರುವ 20 ಲಕ್ಷ ರೂ. ಸಿ.ಎಸ್.ಆರ್. ನೆರವಿನಿಂದ ಕವಚ ನಿರ್ಮಾಣ ಮಾಡಲಾಗಿದ್ದು, ಈ ಬಸ್ ಗಳು ಪ್ರವಾಸಿಗರಿಗೆ ಹೊಸ ಅನುಭವ ನೀಡುತ್ತವೆ ಎಂದರು.
ವಿಧಾನಸೌಧದ ಮುಂದೆ ಈ ಬಸ್ ಗಳಿಗೆ ಹಸಿರು ನಿಶಾನೆ ತೋರಿದ ಸಚಿವರು, ನಂತರ ಸಫಾರಿ ವಾಹನದಲ್ಲಿ ವಿಕಾಸಸೌಧಕ್ಕೆ ಅಧಿಕಾರಿಗಳೊಂದಿಗೆ ಪ್ರಯಾಣಿಸಿದರು.
ಬಸ್ ಉದ್ಘಾಟನೆಯ ವೇಳೆ ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಜಿ.ಡಿ.ಹರೀಶ್ ಗೌಡ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ ಮತ್ತಿತರರು ಪಾಲ್ಗೊಂಡಿದ್ದರು.
ಜುಲೈನಲ್ಲಿ ಸಕಲೇಶಪುರದ ಬಳ್ಳೆಯಲ್ಲಿ ‘ಅರ್ಜುನ ಆನೆ’ ಸ್ಮಾರಕ್ಕೆ ಶಿಲಾನ್ಯಾಸ: ಸಚಿವ ಈಶ್ವರ ಖಂಡ್ರೆ
BREAKING : 6 ರಾಜ್ಯಗಳ 8 ಲೋಕಸಭಾ ಕ್ಷೇತ್ರಗಳಲ್ಲಿ ‘EVM ಪರಿಶೀಲನೆ’ಗೆ ‘ಚುನಾವಣಾ ಆಯೋಗ’ ಅರ್ಜಿ ಸ್ವೀಕಾರ