Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸ್ವತಃ ವಾದ ಮಂಡಿಸಲಿರುವ ಕೇಜ್ರಿವಾಲ್! ನ್ಯಾಯಾಧೀಶರ ಬದಲಾವಣೆಗೆ ಆಗ್ರಹ

06/04/2026 8:20 PM

ಯಾವಾಗಲೂ ಸುಸ್ತಾಗುತ್ತಿದೆಯೇ? ‘ಸದಾ ಆಯಾಸ’ಕ್ಕೆ ಈ 7 ಪ್ರಮುಖ ಕಾರಣಗಳಿರಬಹುದು; ನಿರ್ಲಕ್ಷಿಸಬೇಡಿ!

06/04/2026 8:10 PM

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬನ್ನೇರುಘಟ್ಟ ಉದ್ಯಾನ’ಕ್ಕೆ ತೆರಳೋ ಪ್ರವಾಸಿಗರಿಗೆ ಮತ್ತೊಂದು ಗುಡ್ ನ್ಯೂಸ್: ‘ಚಿರತೆ ಸಫಾರಿ’ ಆರಂಭ | Bannerghatta Park
KARNATAKA

‘ಬನ್ನೇರುಘಟ್ಟ ಉದ್ಯಾನ’ಕ್ಕೆ ತೆರಳೋ ಪ್ರವಾಸಿಗರಿಗೆ ಮತ್ತೊಂದು ಗುಡ್ ನ್ಯೂಸ್: ‘ಚಿರತೆ ಸಫಾರಿ’ ಆರಂಭ | Bannerghatta Park

By kannadanewsnow0926/06/2024 3:17 PM

ಬನ್ನೇರುಘಟ್ಟ :  ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇಂದು ಚಾಲನೆ ನೀಡಿದರು.

ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8  ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದೂ ಮಾಹಿತಿ ನೀಡಿದರು. ಸ್ವಾಗತ ಕಮಾನನ್ನೂ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು.

ಮೃಗಾಲಯಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಶೀಘ್ರವೇ ರಿಯಾಯಿತಿ ದರದಲ್ಲಿ ಸಸಿ ವಿತರಣೆ

ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM2 Mins Read

BIG NEWS: ರಾಜ್ಯದಲ್ಲಿ PUCವರೆಗೆ ಗಂಡು ಮಕ್ಕಳಿಗೆ ಉಚಿತ ಪ್ರಯಾಣದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ: KSRTC ಸ್ಪಷ್ಟನೆ

06/04/2026 7:49 PM1 Min Read

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

06/04/2026 7:23 PM2 Mins Read
Recent News

ಅಬಕಾರಿ ನೀತಿ ಪ್ರಕರಣ: ದೆಹಲಿ ಹೈಕೋರ್ಟ್‌ನಲ್ಲಿ ಸ್ವತಃ ವಾದ ಮಂಡಿಸಲಿರುವ ಕೇಜ್ರಿವಾಲ್! ನ್ಯಾಯಾಧೀಶರ ಬದಲಾವಣೆಗೆ ಆಗ್ರಹ

06/04/2026 8:20 PM

ಯಾವಾಗಲೂ ಸುಸ್ತಾಗುತ್ತಿದೆಯೇ? ‘ಸದಾ ಆಯಾಸ’ಕ್ಕೆ ಈ 7 ಪ್ರಮುಖ ಕಾರಣಗಳಿರಬಹುದು; ನಿರ್ಲಕ್ಷಿಸಬೇಡಿ!

06/04/2026 8:10 PM

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

06/04/2026 8:10 PM

ಮೆಟಾ ಸಂಸ್ಥೆಯಲ್ಲಿ ಮತ್ತೆ ಉದ್ಯೋಗ ಕಡಿತ: ಸ್ಯಾನ್ ಫ್ರಾನ್ಸಿಸ್ಕೋದಲ್ಲಿ 200 ನೌಕರರ ವಜಾ | Mata Layoff

06/04/2026 8:00 PM
State News
KARNATAKA

ಸಾಗರದ ಮಾರಿಗುಡಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ: ಅಧ್ಯಕ್ಷ ನಾಗರಾಜ್, ಪ್ರಧಾನಕಾರ್ಯದರ್ಶಿ ಆನಂದ್ ಸ್ವೀಕಾರ

By kannadanewsnow0906/04/2026 8:10 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಸಮಿತಿಗೆ ಹಳೆಯ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್…

BIG NEWS: ರಾಜ್ಯದಲ್ಲಿ PUCವರೆಗೆ ಗಂಡು ಮಕ್ಕಳಿಗೆ ಉಚಿತ ಪ್ರಯಾಣದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ: KSRTC ಸ್ಪಷ್ಟನೆ

06/04/2026 7:49 PM

ನನಗೆ ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ ಬಂದಿದೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

06/04/2026 7:23 PM

BIG BREAKING: ವಾಹನ ಸವಾರರಿಗೆ ಶಾಕ್: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಹೆಚ್ಚಳ

06/04/2026 7:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.