ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ ದಿನಾಂಕ 11ನೇ ಆಗಸ್ಟ್ 2025 ರಿಂದ ಮೆಟ್ರೋ ರೈಲು ಸೇವೆ ಆರಂಭಿಸಲಾಯಿತು.
ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ, ಬಿಎಂಆರ್‌ಸಿಎಲ್ ಮತ್ತು ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿ, ಮೆಟ್ರೋ ನಿಲ್ದಾಣಗಳ ಸಮೀಪ ಬಸ್ ನಿಲ್ದಾಣಗಳನ್ನು ಹೊಸದಾಗಿ ಸ್ಥಾಪಿಸಲಾಗಿದ್ದು ಹಾಗೂ ಕೆಲವು ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲಾಗಿದೆ.
ಮೆಟ್ರೋ ನಿಲ್ದಾಣಗಳ ಸಮೀಪ ಹೊಸದಾಗಿ ಸ್ಥಾಪಿಸಿರುವ ಬಸ್ ನಿಲ್ದಾಣಗಳು:
- ಬಯೋಕಾನ್ ಹೆಬ್ಬಗೋಡಿ
- ಬೆರೆಟೇನ ಅಗ್ರಹಾರ
- ಸಿಂಗಸಂದ್ರ
- ಹೊಂಗಸಂದ್ರ
- ಸೆಂಟ್ರಲ್ ಸಿಲ್ಕ್ ಬೋರ್ಡ್
- ಆರ್.ವಿ. ರಸ್ತೆ
ಇರುವ ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣದ ಸಮೀಪ ಸ್ಥಳಾಂತರಿಸಿರುವ ನಿಲ್ದಾಣಗಳು:
- ಎಲೆಕ್ಟ್ರಾನಿಕ್ ಸಿಟಿ
- ಹೊಸ ರಸ್ತೆ
- ರಾಗಿಗುಡ್ಡ
ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಲು ಗೇಟ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಕೊನ್ನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಗಳಲ್ಲಿ ಬಸ್ ನಿಲ್ದಾಣಗಳು ಈಗಾಗಲೇ 100 ಮೀಟರ್ ಒಳಗೆ ಲಭ್ಯವಿವೆ.
ಹಸ್ಕೂರು ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳದ ಕೊರತೆಯಿಂದಾಗಿ ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲು ಸಾಧ್ಯವಾಗಿಲ್ಲ. ಮೆಟ್ರೋ ಪ್ರಯಾಣಿಕರು ಈ ಸುಧಾರಿತ ಬಸ್ ಸಂಪರ್ಕವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.
BREAKING: ಬೆಳಗಾವಿ ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದ(ತಿದ್ದುಪಡಿ) ವಿಧೇಯಕ ಅಂಗೀಕಾರ








