ರಾಮನಗರ: ಜಿಲ್ಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಕೊಲೆ ಮಾಡಿರುವಂತ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಸಾತನೂರಿನ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ನಂಜೇಶ್(45) ಎಂಬಾತನನ್ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದಂತ ನಂಜೇಶ್ ಅಚ್ಚಲು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದರು. ಈತನನ್ನು ಸಾತನೂರು ಗ್ರಾಮದಲ್ಲಿನ ಸೈಟ್ ವಿಚಾರವಾಗಿ ಗಲಾಟೆಯಾದ ನಂತ್ರ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ನಂಜೇಶ್ ಹಾಗೂ ಶ್ರೀನಿವಾಸ್ ನಡುವೆ ಜಗಳ ಉಂಟಾದ ನಂತ್ರ, ಶ್ರೀನಿವಾಸ್ ಎಂಬಾತ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಈ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ನಂಜೇಶ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಂಜೇಶ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.