ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಎನ್ನುವಂತೆ ಅತ್ಯಾಚಾರ ಪ್ರಕರಣ ವರದಿಯಾಗಿದೆ. 10 ವರ್ಷದ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರವನ್ನು ಕಾಮುಕರು ನಡೆಸಿರೋದು ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಇಬ್ಬರು ಕೀಚಕರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಳ್ಳಿಯೊಂದರಲ್ಲಿ 10 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು 24 ಹಾಗೂ 40 ವರ್ಷದವರಾಗಿದ್ದಾರೆ. ಈ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯ ತಾಯಿ ಈ ಸಂಬಂಧ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಈ ಇಬ್ಬರು ತಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತನ್ನ ಅಪ್ರಾಪ್ತ ಮಗಳ ಮೇಲೆ ಕಳೆದ ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಈ ವಿಷಯವನ್ನು ಯಾರಿಗಾದರೂ ಬಹಿರಂಗಪಡಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿಸಲಾಗಿದೆ.
ಅಂದಹಾಗೇ ಸಂತ್ರಸ್ತ ಬಾಲಕಿ ತನ್ನ ಶಾಲೆಯ ಶಿಕ್ಷಕಿಗೆ ಕಳೆದ ಒಂದು ವರ್ಷದಿಂದ ತನ್ನ ಮೇಲೆ ಪದೇ ಪದೇ ಅತ್ಯಾಚಾರ ನಡೆಸುತ್ತಿರುವ ಬಗ್ಗೆ ತಿಳಿಸಿದ್ದಾರೆ. ಈ ವಿಚಾರವನ್ನು ತಿಳಿದು ಆಘಾತಗೊಂಡ ಶಿಕ್ಷಕಿಯು ಆಕೆಯ ಪೋಷಕರನ್ನು ಕರೆದು ವಿಷಯ ತಿಳಿಸಿದ್ದಾರೆ. ಆ ಬಳಿಕ ಸಂತ್ರಸ್ತ ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ಬಳಿಕ, ಈ ಘಟನೆ ಬೆಳಕಿಗೆ ಬಂದಿದೆ.
ಜನರ ಅನುಕೂಲಕ್ಕಾಗಿ ನೂತನ ತೆರಿಗೆ ನೀತಿ ಜಾರಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶ ಉಜ್ವಲ್ ಭೂಯಾನ್
ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ








