ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಪವಿಶಾಚಿಕ ಕೃತ್ಯ ನಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ, ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ 40 ವರ್ಷದ ತಂದೆಯ ವಿರುದ್ದ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ನೊಂದ ಬಾಲಕಿ ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.








