ತುಮಕೂರು: ಬ್ಯಾಂಕ್ನಲ್ಲಿದ್ದ ಹಣಕ್ಕಾಗಿ ದೊಡ್ಡಮ್ಮ ಇಸ್ತ್ರಿ ಪೆಟ್ಟಿಗೆಯಿಂದ ಐದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ತೊಡೆ ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಡಘಟ್ಟೆ ಗ್ರಾಮದಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮದ ನಿವಾಸಿಯಾಗಿರುವ ಬಾಲಕಿ ಲಕ್ಷ್ಮೀಗೆ ದೊಡ್ಡಮ್ಮ ನರಸಮ್ಮ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ನಡುವೆ ಲಕ್ಷ್ಮಿ ಎಂಬ ಬಾಲಕಿಯ ತಾಯಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ತನ್ನ ಮಗಳಿಗಾಗಿ ತಾಯಿ 4 ಲಕ್ಷ ಹಣ ಡಿಪಾಸಿಟ್ ಮಾಡಿದ್ದರು. ಈ ಹಣವನ್ನು ಲಪಟಾಯಿಸಲು ಬಾಲಕಿಗೆ ದೊಡ್ಡಮ್ಮ . ಹಣಕ್ಕಾಗಿ ಬಾಲಕಿಯ ತೊಡೆಯನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾಳೆ ಎನ್ನಲಾಗಿದೆ. ಇನ್ನು ಬಾಲಕಿ ಲಕ್ಷ್ಮೀ ಐದನೇ ತರಗತಿ ಓದುತ್ತಿದ್ದಾಳೆ. ಆಕೆಯ ಪರೀಕ್ಷೆ ನಡೆಯುತ್ತಿದ್ದು, ಸೋಮವಾರ ಪರೀಕ್ಷೆಗೆ ಹಾಜರಾಗಿರಲಿಲ್ಲ. ಹೀಗಾಗಿ ಶಿಕ್ಷಕರು ಮತ್ತು ಸಂಬಂಧಿಕರು ಬಾಲಕಿಯನ್ನು ಊರಿಗೆ ಕರೆಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪ್ರಕರಣ ಸಂಬಂಧ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಮಧುಮೇಹ ಎಂದರೇನು? ಮೂತ್ರಪಿಂಡ ಮತ್ತು ಹೃದಯದ ಮೇಲೆ ಅದರ ಪರಿಣಾಮಗಳು ಹೀಗಿವೆ!
ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ : ಸಿಎಂ ಸಿದ್ದರಾಮಯ್ಯ