ಚಾಮರಾಜನಗರ : ಚಾಮರಾಜನಗರದಲ್ಲಿ ಮತ್ತೆ ಹುಲಿ ಉಪಟಳ ಮುಂದುವರೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನಮ್ಮಲ್ಲಿಪುರ ಗ್ರಾಮದಲ್ಲಿ ಹುಲಿ ಮತ್ತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ಮೂರು ದಿನಗಳ ಹಿಂದೆ ಅಷ್ಟೇ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರದಲ್ಲಿ ಮತ್ತೊಂದು ಹುಲಿ ಕಾಣಿಸಿಕೊಂಡಿದೆ ಹುಲಿ ಓಡಾಟ ಹಿನ್ನೆಲೆಯಲ್ಲಿ ಚೆನ್ನಮ್ಮಲ್ಲಿಪುರ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮತ್ತೆ ಕುಂಬಿಂಗ್ ಕಾರ್ಯಚರಣೆ ನಡೆಸಲಿದ್ದಾರೆ.








