ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವತಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಆರ್ ಎಂಎಲ್ ನಗರದ ಸಮೀಪ ಮುಸ್ಲಿಂ ಯುವತಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಹಿಂದೂ ಯುವಕನನ್ನು ಅಡ್ಡಗಡ್ಡಿ ೨೦ ಕ್ಕೂ ಹೆಚ್ಚು ಮಂದಿ ಸಾಮೂಹಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ ನಂದನ್ ಎಂಬ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದ್ದು, ಸದ್ಯ ಯುವಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.