ಬೀದರ್ : ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಧರ್ಮಿಯ ವ್ಯಕ್ತಿಯ ಜೊತೆಗೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮದ ಮಹಿಳೆಯ ಮೇಲೆ ಯುವಕರು ಹಲ್ಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ.
ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ ಧರ್ಮೀಯ ಮಹಿಳೆ ಮೇಲೆ ಅದೇ ಧರ್ಮದ ಕೆಲ ಯುವಕರು ಹಲ್ಲೆ ಮಾಡಿದ್ದಾರೆ. ವ್ಯಕ್ತಿ ಆಟೋ ಚಾಲಕನಾಗಿದ್ದು, ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಸದ್ಯ
ಇನ್ನು ಕಳೆದ ಜನವರಿ 08ರಂದು ಅನ್ಯಕೋಮಿನ ಹಿಂದೂ ಧರ್ಮದ ವ್ಯಕ್ತಿ ಮತ್ತು ಮುಸ್ಲಿಂ ಧರ್ಮದ ಮಹಿಳೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನಾಕ್ಲಕ್ರಾಸ್ ಬಳಿ ಇರುವ ಖಾಸಗಿ ಹೋಟೆಲ್ನಲ್ಲಿ ತಂಗಿದ್ದರು. ಈ ವಿಚಾರ ತಿಳಿದ ಕೆಲ ಮುಸ್ಲಿಂ ಯುವಕರು ಏಕಾಏಕಿ ಹೋಟೆಲ್ಗೆ ನುಗ್ಗಿ ದಾಂಧಲೆ ಮಾಡಿ ಮಹಿಳೆ ಮತ್ತು ಪುರುಷನ ಮೇಲೆ ಹಲ್ಲೆ ನಡೆಸಿದ್ದರು.