ಬೆಂಗಳೂರು : ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರ ನಿವಾಸಿ ಸುರೇಶ್ ಎಂಬುವವರನ್ನು ಅವರ ಸ್ನೇಹಿತರು ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದು, ಹಣಕಾಸು ವ್ಯವಹಾರವು ಜಗಳಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ತ್ಯಾಗರಾಜನಗರದ ನಿವಾಸಿ ಸುರೇಶ್ (45) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತರಾದ ವೇಲು, ಸ್ಟೀಫನ್ ಹಾಗೂ ಪ್ರದೀಪ್ ನನ್ನು ಅರೆಸ್ಟ್ ಮಾಡಲಾಗಿದೆ. ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿಗಳು, ಸುರೇಶ್‌ಗೆ ಬಿಯರ್ ಬಾಟಲ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.








