ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕೆಲಸದಿಂದ ತೆಗೆದು ಹಾಕಿದಕ್ಕೆ ಚಾಕು ಇರಿದು ಮ್ಯಾನೇಜರ್ ನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ.
ತಿಗಳರಪಾಳ್ಯದ ಪವರ್ ಪ್ರೈವೇಟ್. ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್ (38) ನನ್ನ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ರಾಜಗೋಪಾಲ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.








