ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಮಗಳೊಂದಿಗೆ ಸಲುಗೆಯಿಂದ ಇರಬೇಡ ಎಂದಿದ್ದಕ್ಕೆ ತಂದೆಯನ್ನು ಕೆಲಸಗಾರನೇ ಮಾರಕಾಸ್ತ್ರದಿಂದ ಹೊಡೆದು ಹತ್ಯೆಗೈದ ಘಟನೆ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆ ಬಳಿಯಿರುವ ಎಸ್.ಬಿ ಟಿಂಬರ್ ಅಂಗಡಿಯಲ್ಲಿ ನಡೆದಿದೆ.
ಸೈಯ್ಯದ್ ಅಸ್ಲಂ (60) ಕೊಲೆಯಾದ ಟಿಂಬರ್ ಅಂಗಡಿ ಮಾಲೀಕ. 23 ವರ್ಷದ ಯುವಕ ಇಲಿಯಾಸ್ ಕೊಲೆ ಆರೋಪಿಯಾಗಿದ್ದು, ಈತ ಸೈಯದ್ ನ ಅಂಗಡಿಯಲ್ಲಿ ಕಲೆದ ಎರಡು ವರ್ಷಗಳಿಂದ ಕೆಲಸಕ್ಕಿದ್ದ. ಸೈಯ್ಯದ್ ಮಗಳೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ.
ಇದರಿಂದ ಸೈಯದ್, ಕೆಲಸಗಾರನಿಗೆ ತಮ್ಮ ಮಗಳ ಜೊತೆ ಸಲುಗೆಯಿಂದ ಮಾತನಾಡಬೇಡ, ಸರಿಯಲ್ಲ ಎಂದು ಬುದ್ಧಿವಾದ ಹೇಳಿದ್ದಾರೆ. ಇಂದು ಬೆಳಗ್ಗೆ ಪಾನಮತ್ತನಾಗಿ ಅಂಗಡಿ ಬಳಿ ಬಂದಿದ್ದ ಆರೋಪಿ ಹಾಗೂ ಸೈಯ್ಯದ್ ಅಸ್ಲಮ್ ನಡುವೆ ಇದೇ ವಿಚಾರವಾಗಿ ಮತ್ತೆ ಗಲಾಟೆಯಾಗಿತ್ತು. ಸಿಟ್ಟಿಗೆದ್ದ ಆರೋಪಿ, ಅಂಗಡಿಯಲ್ಲಿದ್ದ ಮಾರಕಾಸ್ತ್ರದಿಂದ ಹೊಡೆದು ಸೈಯ್ಯದ್‌ನನ್ನು ಹತ್ಯೆಗೈದಿರುವುದು ತನಿಖೆಯಿಂದ ತಿಳಿದು ಬಂದಿದೆ.