Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM

ALERT : ಆಹಾರ ಉತ್ಪನ್ನಗಳಲ್ಲಿ ‘ಅಶ್ವಗಂಧ’ ಬಳಕೆ ಬಗ್ಗೆ `FSSAI’ ಮಹತ್ವದ ಪ್ರಕಟಣೆ.!

24/04/2026 12:13 PM

BREAKING : ಪಾಕಿಸ್ತಾನಿ `ISI’ ಪರ ಕೆಲಸ ಮಾಡುತ್ತಿರುವ ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್.!

24/04/2026 12:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ
KARNATAKA

ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

By kannadanewsnow0923/05/2025 2:42 PM

ವಿಜಯಪುರ : “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.

ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ ಮಾಹಿತಿಯನ್ನು ನೀವೇ ನೀಡಿದ್ದೀರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಒಬ್ಬ ಮೆಂಟಲ್. ಅವರ ಮಾನಸಿಕ ಆರೋಗ್ಯ ಹದಗೆಟ್ಟಿರ ಬೇಕು. ತಲೆ ಕೆಟ್ಟು ಹೋಗಿದೆ” ಎಂದು ಜರಿದರು.

ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ ಎನ್ನುವ ಕುಮಾರಸ್ವಾಮಿ ಅವರ ಸರಣಿ ಟೀಕೆಗಳ ಕುರಿತು ಕೇಳಿದಾಗ, “ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಹಾಸನದಲ್ಲಿಯೇ ಏಕೆ ರಾಜಕೀಯ ಮಾಡಲಿಲ್ಲ. ಮೊದಲು ಎಚ್.ಡಿ.ಕುಮಾರಸ್ವಾಮಿ ಎನ್ನುವ ಹೆಸರಿನಲ್ಲಿರುವ ಅವರ ಊರಿನ ಹೆಸರು ಹಾಗೂ ತಂದೆಯ ಹೆಸರನ್ನು ಏಕೆ ಇನ್ನು ಇಟ್ಟುಕೊಂಡಿದ್ದಾರೆ. ಮೊದಲು ಅದನ್ನು ಬದಲಾವಣೆ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ನಾವು ಬೆಂಗಳೂರು ಜಿಲ್ಲೆಯವರು. ಒಂದೊಂದು ಊರಿನ ಹೆಸರಿಗೆ ತನ್ನದೇ ಆದ ಇತಿಹಾಸವಿರುತ್ತದೆ. ಮದ್ರಾಸ್ ಅನ್ನು ಮತ್ತೆ ಏಕೆ ಚೆನ್ನೈ ಎಂದು ಕರೆದರು‌. ಗುಲ್ಬರ್ಗಾವನ್ನು ಕಲಬುರ್ಗಿ ಎಂದು ಮರುನಾಮಕರಣ ಮಾಡಲಾಗಿದೆ. ನಮಗೂ ನಮ್ಮದೇ ಆದಂತಹ ಆಸೆ ಇರುತ್ತದೆ. ಅವರಿಗೆ ಏನು ತೊಂದರೆಯಾಗಿದೆ?” ಎಂದು ಪ್ರಶ್ನಿಸಿದರು.

ರಿಯಲ್ ಎಸ್ಟೇಟ್ ಗಾಗಿ ಹೆಸರು ಬದಲಾವಣೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಹೌದು, ನಮ್ಮ ಹಳ್ಳಿಯ ಜನ ಉದ್ದಾರವಾಗಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು. ನಮ್ಮ ಜನರ ಆಸ್ತಿ ಮೌಲ್ಯ ಜಾಸ್ತಿಯಾಗಬೇಕು. ಪ್ರತಿಯೊಬ್ಬ ರೈತನಿಗೂ ಒಳ್ಳೆಯದಾಗಬೇಕು. ಹೊರಗಡೆ ದೇಶದಿಂದ ಜನರು ಬಂದು ಬಂಡವಾಳ ಹೂಡಿಕೆ ಮಾಡಬೇಕು. ಅಭಿವೃದ್ಧಿ ಆಗಬೇಕು ಎಂಬುದು ನಮ್ಮ ಆಸೆ” ಎಂದರು.

“ಸಂಸತ್ ಕ್ಷೇತ್ರವನ್ನು ಮೊದಲು ಕನಕಪುರ ಎಂದು ಕರೆಯಲಾಗುತ್ತಿತ್ತು. ಅದನ್ನು ಬೆಂಗಳೂರು ಗ್ರಾಮಾಂತರ ಎಂದು ಆನಂತರ ಏಕೆ ಮಾಡಿದರು? ರಾಮನಗರದ ಹೆಸರು ಬದಲಾವಣೆ ಮಾಡುತ್ತಿಲ್ಲ. ಜತೆಗೆ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ. ನಾವು ಕೇವಲ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಗೆ ರಾಜಾರೋಷವಾಗಿ 25 ಲಕ್ಷ‌ ಕೊಟ್ಟಿದ್ದೇವೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಿಮ್ಮ ಹೆಸರು ಡಿ.ಕೆ.ಸುರೇಶ್ ಅವರ ಹಾಗೂ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರ ಹೆಸರು ಇರುವುದರ ಬಗ್ಗೆ ಕೇಳಿದಾಗ, “ನಮ್ಮ ಪಕ್ಷ ನಡೆಸುವಂತಹ ಪತ್ರಿಕೆ‌. ಅದಕ್ಕೆ ನಾನು ಹಾಗೂ ಸುರೇಶ್ 25 ಲಕ್ಷ ದುಡ್ಡು ಕೊಟ್ಟಿದ್ದೇವೆ. ‌ನಮ್ಮ ಟ್ರಸ್ಟ್‌ ನಿಂದಲೂ ದೇಣಿಗೆ ನೀಡಿದ್ದೇವೆ” ಎಂದರು.

ದೇಣಿಗೆ ನೀಡಿರುವುದರಿಂದ ನಿಮಗೆ ತೊಂದರೆಯಾಗುತ್ತದೆಯೇ ಎಂದಾಗ, “ನಾವು ದುಡಿದಂತಹ ಆಸ್ತಿಯಿಂದ ರಾಜರೋಷವಾಗಿ ಹಣ ನೀಡಿದ್ದೇವೆ. ನಾವು ಕದ್ದುಮುಚ್ಚಿ ಹಣ ನೀಡಿಲ್ಲ” ಎಂದು ಹೇಳಿದರು.

ಆಸ್ಟ್ರೇಲಿಯಾದಲ್ಲಿ ಭೀಕರ ಪ್ರವಾಹ: ನಾಲ್ವರು ಸಾವು, ಸಂಕಷ್ಟದಲ್ಲಿ 50,000 ಜನರು

Share. Facebook Twitter LinkedIn WhatsApp Email

Related Posts

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM2 Mins Read

ಕುಟುಂಬದ ಆರ್ಥಿಕ ಭದ್ರತೆಗಾಗಿ ಪ್ರತಿಯೊಬ್ಬರೂ ಮಾಡಲೇಬೇಕಾದ 7 ಮುಖ್ಯ ಕೆಲಸಗಳಿವು.!

24/04/2026 12:04 PM2 Mins Read

ಬೇಸಿಗೆಯಲ್ಲಿ ಕಬ್ಬಿನ ರಸ, ನಿಂಬೆ ರಸ ಅಥವಾ ತೆಂಗಿನ ನೀರು : ಆರೋಗ್ಯಕ್ಕೆ ಯಾವುದು ಬೆಸ್ಟ್ ತಿಳಿಯಿರಿ.!

24/04/2026 11:42 AM2 Mins Read
Recent News

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

24/04/2026 12:22 PM

ALERT : ಆಹಾರ ಉತ್ಪನ್ನಗಳಲ್ಲಿ ‘ಅಶ್ವಗಂಧ’ ಬಳಕೆ ಬಗ್ಗೆ `FSSAI’ ಮಹತ್ವದ ಪ್ರಕಟಣೆ.!

24/04/2026 12:13 PM

BREAKING : ಪಾಕಿಸ್ತಾನಿ `ISI’ ಪರ ಕೆಲಸ ಮಾಡುತ್ತಿರುವ ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್.!

24/04/2026 12:08 PM

ಕುಟುಂಬದ ಆರ್ಥಿಕ ಭದ್ರತೆಗಾಗಿ ಪ್ರತಿಯೊಬ್ಬರೂ ಮಾಡಲೇಬೇಕಾದ 7 ಮುಖ್ಯ ಕೆಲಸಗಳಿವು.!

24/04/2026 12:04 PM
State News
KARNATAKA

SHOCKING : ಪೋಷಕರೇ ಎಚ್ಚರ : ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು ಬಾಲಕಿ ದುರಂತ ಸಾವು.!

By kannadanewsnow5724/04/2026 12:22 PM KARNATAKA 2 Mins Read

ಶಿವಮೊಗ್ಗ : ಶಾಲಾ ದಿನಗಳ ಜಂಜಾಟದಿಂದ ಮುಕ್ತಿ ಪಡೆದು, ಅಜ್ಜಿ-ಚಿಕ್ಕಮ್ಮನ ಮನೆಗೆ ತೆರಳಿ ರಜೆಯ ಮಜಾ ಸವಿಯಬೇಕಿದ್ದ ಬಾಲಕಿಯೊಬ್ಬಳು ಆಟವಾಡುತ್ತಿದ್ದ…

ಕುಟುಂಬದ ಆರ್ಥಿಕ ಭದ್ರತೆಗಾಗಿ ಪ್ರತಿಯೊಬ್ಬರೂ ಮಾಡಲೇಬೇಕಾದ 7 ಮುಖ್ಯ ಕೆಲಸಗಳಿವು.!

24/04/2026 12:04 PM

ಬೇಸಿಗೆಯಲ್ಲಿ ಕಬ್ಬಿನ ರಸ, ನಿಂಬೆ ರಸ ಅಥವಾ ತೆಂಗಿನ ನೀರು : ಆರೋಗ್ಯಕ್ಕೆ ಯಾವುದು ಬೆಸ್ಟ್ ತಿಳಿಯಿರಿ.!

24/04/2026 11:42 AM

ಪೋಷಕರೇ ಗಮನಿಸಿ : ಕರ್ನಾಟಕದಲ್ಲಿ `ವಿಕಲಚೇತನ’ರ ಶಾಲೆಗಳು ಎಷ್ಟಿವೆ? ಇಲ್ಲಿದೆ ಮಾಹಿತಿ

24/04/2026 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.