Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ: ಮಾ.8ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’!
KARNATAKA

GOOD NEWS: ‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ: ಮಾ.8ರಂದು ರಾಜ್ಯಾದ್ಯಂತ ‘ರಾಷ್ಟ್ರೀಯ ಲೋಕ್ ಅದಾಲತ್’!

By kannadanewsnow0927/02/2025 5:55 PM

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್.8ರಂದು ರಾಜ್ಯಾಧ್ಯಂತ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳು

ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು.

BREAKING: ನಾಳೆ ರಾಜ್ಯ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ | CM Siddaramaiah

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.