ಕೆಎನ್ಎನ್ ಡಿಜಿಟಲ್ ಡೆಸ್ಕ್ : ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಘಟನೆ ಮಾಸುವ ಮುನ್ನವೆ ಅಂತಹದ್ದೆ ಮತ್ತೊಂದು ಘಟನೆ ವರದಿಯಾಗಿದೆ.
ಡಿಸೆಂಬರ್ 6 ರಂದು ಪ್ಯಾರಿಸ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಹೊದಿಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎನ್ನಲಾಗಿದೆ.
ಪ್ರಯಾಣಿಕ ಲಿಖಿತವಾಗಿ ಕ್ಷಮೆಯಾಚಿಸಿದ ಕಾರಣ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ವಿಮಾನವು ಡಿಸೆಂಬರ್ 6 ರಂದು ಬೆಳಿಗ್ಗೆ 9:40 ರ ಸುಮಾರಿಗೆ ದೆಹಲಿಯಲ್ಲಿ ಇಳಿಯಿತು. ಕುಡಿದ ಅಮಲಿನಲ್ಲಿದ್ದ ಪ್ರಯಾಣಿಕನೋರ್ವ ಮಹಿಳಾ ಪ್ರಯಾಣಿಕರ ಹೊದಿಕೆ ಮೇಲೆ ಮೂತ್ರ ವಿಸರ್ಜಿಸಿದ್ದರು ಮಹಿಳಾಯುವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ದೂರಿದ್ದರು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪುರುಷ ಪ್ರಯಾಣಿಕನು ವಿಮಾನದಿಂದ ಕೆಳಗಿಳಿದ ಕೂಡಲೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಅವರನ್ನು ಬಂಧಿಸಿತು. ಆದರೆ ಇಬ್ಬರು ಪ್ರಯಾಣಿಕರು ಪರಸ್ಪರ ರಾಜಿ ಮಾಡಿಕೊಂಡರು. ಲಿಖಿತ ಕ್ಷಮೆಯಾಚನೆ ಮಾಡಿದ ಹಿನ್ನೆಲೆಯಲ್ಲಿ ಪ್ರಯಾಣಿಕನ್ನು ಬಿಡಲು ಅನುಮತಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಕೊರೊನಾ ಲಸಿಕೆ’ ತೆಗೆದುಕೊಂಡರೆ ‘ವಿಮಾ ಪ್ರೀಮಿಯಂ’ನಲ್ಲಿ ರಿಯಾಯಿತಿ, ಈ ಸೂಪರ್ ‘ಆಫರ್’ ಕುರಿತು ನಿಮ್ಗೆ ಗೊತ್ತಾ?
BREAKING NEWS: ಎನ್ಐಎಯಿಂದ ಶಿವಮೊಗ್ಗದಲ್ಲಿ ಮತ್ತೊಬ್ಬ ಶಂಕಿತ ಉಗ್ರ ವಶಕ್ಕೆ