ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಪ್ರೀಡಂ ಪಾರ್ಕ್ ಗೆ ಆಗಮಿಸಿದ್ದು, ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈಗಾಗಲೇ ತರಗತಿಗಳು ಆರಂಭವಾಗಿದ್ದು, ಇತ್ತ ಉಪನ್ಯಾಸಕರು ಪ್ರತಿಭಟನೆಗೆ ಇಳಿದಿದ್ದಾರೆ.