ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜಿನಾಮೆ ನೀಡಿದ್ದಾರೆ.ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ವೈದ್ಯಕೀಯ ಸಚಿವರಾದಂತಹ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರ ಹೆಸರು ಕೂಡ ಈ ಒಂದು ಪ್ರಕರಣದಲ್ಲಿ ತಳಕು ಹಾಕಿಕೊಂಡಿದೆ ಎಂದು ತಿಳಿದುಬಂದಿದೆ.
ಹೌದು ಸದ್ಯ ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ಧ ಕೂಡ ಈ ಒಂದು ಪ್ರಕರಣದಲ್ಲಿ ಅವರ ಹೆಸರು ಬಂದಿರುವ ಆರೋಪ ಕೇಳಿ ಬಂದಿದೆ. ಮೇ 24ರಂದು ಸಚಿವ ಶರಣಪ್ರಕಾಶ್ ಪಾಟೀಲ್ ಕೊಠಡಿಯಲ್ಲಿ ಮೀಟಿಂಗ್ ನಡೆದಿದೆ ಎನ್ನಲಾಗಿದೆ. ಈ ವೇಳೆ ಚಂದ್ರಶೇಖರ್ ಮತ್ತು ಪರಶುರಾಮ್ ಅವರು ನಿಗಮದ ಅಧ್ಯಕ್ಷ ದದ್ದಲ್ ಭೇಟಿಯಾಗಿದ್ದರು. ಹೀಗಾಗಿ ಚಂದ್ರಶೇಖರ್ ಸಾವಿಗೂ ಮುನ್ನ ದದ್ದಲ್‍ಗೆ ಎಲ್ಲವೂ ಗೊತ್ತಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸಿಸಿಟಿವಿ ದೃಶ್ಯ ವಶಕ್ಕೆ ಪಡೆಯಲು ಸೂಚಿಸುವಂತೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತ ಹಗರಣದಲ್ಲಿ ಮತ್ತೊಬ್ಬ ಸಚಿವರ ತಲೆದಂಡಕ್ಕೆ ಆಗ್ರಹ ಕೇಳಿ ಬಂದಿದೆ. ಸಚಿವ ಶರಣಪ್ರಕಾಶ್, ದದ್ದಲ್ ಇಬ್ಬರೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸ್ವ- ಇಚ್ಛೆಯಿಂದಲೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ನೀಡುವಂತೆ ಯಾರೂ ನ್ನಗೆ ಒತ್ತಡ ಹಾಕಿಲ್ಲ. ಪ್ರಕರಣದಲ್ಲಿ ನಾನು ನಿರಪರಾಧಿಯಾಗಿದ್ದೇನೆ ಎಂದು ಹೇಳಿದ್ದರು.
ಈಗಾಗಲೇ ಈ ಒಂದು ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಗೆ ವಹಿಸಿತ್ತು. ಇದಾದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ಅವರು ಇತ್ತೀಚಿಗೆ ರಾಜೀನಾಮೆ ನೀಡಿದ್ದರು. ಇದಿಗ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಹೆಸರು ಕೇಳಿ ಬರುತ್ತಿರುವ ಹಿನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಇದು ತಲೆನೋವುವಾಗಿ ಪರಿಣಮಿಸಿದೆ.