ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಲಾಗಿದೆ. ಅತ್ಯಾಚಾರ ಕೇಸ್ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಿದೆ.








