ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡೋದಕ್ಕೆ ಮುಂದಾಗಿದೆ. ಅದೇ ಶೀಘ್ರದಲ್ಲೇ ನೀರಿನ ದರ ಏರಿಕೆಯನ್ನು ಮಾಡುವಂತ ಸುಳಿವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂ ಎಸ್ ಎಸ್ ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಗಳು ಮುಂದೆ ಬರುತ್ತಿಲ್ಲ. ಸಧ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ ಎಂದರು.
ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನವನ್ನು ಕೇಳುತ್ತಿವೆ ಎಂದು ಹೇಳಿದರು.
ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ. ಹೀಗಾಗಿ ನೀರಿನ ದರ ಪರಿಷ್ಕರಣೆ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳು ಸಾಧ್ಯಾಸಾಧ್ಯತೆಗಳ ಪರಿಶೀಲಿಸಿದ ನಂತರ ದರ ಏರಿಕೆ ವಿಚಾರವಾಗಿ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ನನ್ನ ಸ್ಪರ್ಧೆ ಬಿಟ್ಟು ಬೇರೆ ವಿಧಿಯಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi