ಬೆಂಗಳೂರು: ರಾಜ್ಯ ಸರ್ಕಾರದಿಂದ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಅನ್ನು ಸರ್ಕಾರ ನೀಡಿದೆ.
ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ನಾಳೆಯಿಂದಲೇ ನೂತನ ಮುದ್ರಾಂಕ ಶುಲ್ಕ ಜಾರಿಯಾಗಲಿದೆ. ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕ ನಾಳೆಯಿಂದ ಹೆಚ್ಚಳವಾಗಲಿದೆ.
ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿದಂತೆ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ನೋಂದಣಿ ಶುಲ್ಕವನ್ನು ಶೇ.1ರಿಂದ ಶೇ.2ರಷ್ಟು ಪರಿಷ್ಕರಿಸಿದೆ. ನಾಳೆಯಿಂದ ಜಾರಿಗೆ ಬರುವಂತೆ ಶೇ.1ರಿಂದ ಶೇ.2ರಷ್ಟು ಪರಿಷ್ಕರಿಸಿದೆ.
ತಮಿಳುನಾಡು ರಾಜ್ಯದಲ್ಲಿ ಶೇ.9ರಷ್ಟು ಕೇರಳದಲ್ಲಿ ಶೇ.10ರಷ್ಟು, ಆಂಧ್ರಪ್ರದೇಶದಲ್ಲಿ ಶೇ.7.5ರಷ್ಟು, ತೆಲಂಗಾಣದಲ್ಲಿ ಶೇ.7.5ರಷ್ಟು ಶುಲ್ಕವನ್ನು ದಾಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ವಿಧಿಸಲಾಗುತ್ತಿದೆ. ಇತರ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು ಸರ್ಕಾರ ಸಮರ್ಥನೆ ಮಾಡಿದೆ.
1 ಲಕ್ಷ ಮೌಲ್ಯಕ್ಕೆ ಮುದ್ರಾಂಕ ಶುಲ್ಕ 1 ಸಾವಿರ ಆಗುತ್ತಿತ್ತು. ಇದೀಗ ನಾಳೆಯಿಂದ ಹೊಸ ಮುದ್ರಾಂಕ ನೋಂದಣಿ ಶುಲ್ಕ ಜಾರಿಯಾಗಲಿದೆ. ಹೊಸ ಶುಲ್ಕದ ಪ್ರಕಾರ 1 ಲಕ್ಷಕ್ಕೆ 2 ಸಾವಿರ ಶುಲ್ಕ ಪಾವತಿಸಬೇಕು. ಹೊರ ರಾಜ್ಯಗಳ ದರ ವ್ಯತ್ಯಾಸದ ಸಮರ್ಥನೆ ಕೊಟ್ಟು ಮುದ್ರಾಂಕ ನೋಂದಣಿ ಶುಲ್ಕವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಮೀಸಲಾತಿಗೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧ ಇಲ್ಲ: ಸಚಿವ ಈಶ್ವರ ಖಂಡ್ರೆ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ