ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಬಲಿಯಾಗುತ್ತಿರುವವರ ಸರಣಿ ಮುಂದುವರೆದಿದೆ. ಬಿಎಂಟಿಸಿ ಬಸ್ ಅಪಘಾತದಲ್ಲಿ ( BMTC Bus Accident ) ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಂತ ಯೋಧನೊಬ್ಬ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಯೋಧನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿನ ಬನಶಂಕರಿ ಬಳಿಯಲ್ಲಿ ನವೆಂಬರ್ 7ರಂದು ಬಿಎಂಟಿಸಿ ಬಸ್ ( BMTC Bus ) ಡಿಕ್ಕಿಯಾಗಿ ಯೋಧ ಚೇತನ್(22) ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಚಿಕಿತ್ಸೆ ಪಡೆಯುತ್ತಿದ್ದಂತ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮದ ಯೋಧ ಚೇತನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ ವರ್ತನೆ- ಎನ್.ರವಿಕುಮಾರ್ ಖಂಡನೆ
ಮೃತ ಯೋಧನ ಚೇತನ್ ಪಾರ್ಥೀವ ಶರೀರವನ್ನು ಸ್ವಗ್ರಾಮ ಕೋಲಾರ ಜಿಲ್ಲೆಯ ಬಂಗಾರ ಪೇಟೆ ತಾಲೂಕಿನ ಚಿನ್ನಕೋಟೆ ಗ್ರಾಮಕ್ಕೆ ಕೊಂಡೊಯ್ಯಲಾಗಿದೆ. ಯೋಧನ ಪಾರ್ಥೀವ ಶರೀರವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.