ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ‍್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಂಗಾಪುರ ಗ್ರಾಮದ ಮನೆಯಲ್ಲಿ ಪ್ರಜ್ವಲ್ (16) ಎಂಬ ವಿದ್ಯಾರ್ಥಿ ಮಫ್ಲರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಜ್ವಲ್ ಹೊಳಲ್ಕರೆಯ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ.
ಪರೀಕ್ಷೆ ಬರೆಯದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಿಕ್ಷಕರು ಹೇಳಿದ್ದ ಹಿನ್ನೆಲೆಯಲ್ಲಿ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಹೊಳ್ಕರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.