ಬೆಂಗಳೂರು : ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಮುತುವರ್ಜಿಯಿಂದ ಅವರ ಆರೈಕೆ ಮಾಡುವಂತೆ ತಿಳಿಸಿದ್ದೇನೆ. ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.
ಶಶಿಧರ ಭಟ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ…
— Siddaramaiah (@siddaramaiah) July 22, 2024