ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಅದ್ಭುತ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಚಿತ್ರದ ಸಾಂಗ್ ಅಂದರೆ ಎಲ್ಲರ ಗುಣಗಾನ ಮಾಡುತ್ತಿದ್ದಾರೆ.
ಹಾಡು ‘ವರಾಹ ರೂಪಂ’ ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.
ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ.