ಬೆಂಗಳೂರು: ನಗರದ ಮತ್ತೊರ್ವ ಶಂಕಿತ ಉಗ್ರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಅರೆಸ್ಟ್ ಆಗಿರೋ ಅಖ್ತರ್ ಸಂಪರ್ಕದಲ್ಲಿದ್ದ ಶಂಕಿತ ಉಗ್ರ ಎಂದು ಹೇಳಲಾಗಿದೆ.
ಪ್ರಕರಣ ಸಂಬಂಧ ಈತನ ಕಾಂಟ್ಯಾಕ್ಟ್ ನಲ್ಲಿರೋರ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಮತ್ತೋರ್ವ ಶಂಕಿತ ಉಗ್ರನನ್ನ ವಶಕ್ಕೆ ಪಡೆದದಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.