ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಳೆದೆರಡು ವಾರಗಳಲ್ಲಿ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ಸಂಖ್ಯೆ ಮೂರಾಗಿದೆ.
ತಾಯಿ ಗದರಿಸಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ಹದಿಹರೆಯದ ವಿದ್ಯಾರ್ಥಿಗಳ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಆತ್ಮಹತ್ಯೆಯ ಆಲೋಚನೆಗಳಿಂದ ದೂರವಿಡುವಂತೆ ಯುವಜನತೆಯಲ್ಲಿ ಮನವಿ ಮಾಡಿದ್ದಾರೆ.