ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದಂತ ಬೆಂಕಿಯಿಂದಾಗಿ ಪೇಪರ್ ಪ್ಲೇಟ್ ಅಂಗಡಿಯೊಂದು ಹೊತ್ತಿ ಧಗಧಗಿಸಿ ಉರಿದಿದೆ.
ಬೆಂಗಳೂರಿನ ಬೇಗೂರಿನಲ್ಲಿರುವಂತ ಎಸ್ ಎಲ್ ವಿ ಎಂಟರ್ ಪ್ರೈಸಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಪೇಪರ್ ಪ್ಲೇಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂರು ಅಂತಸ್ತಿನ ಕಟ್ಟದಲ್ಲಿ ಬೆಂಕಿಯಿಂದಾಗಿ ಹೊಗೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
GOOD NEWS: ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ‘ಚುನಾವಣಾ ಕರ್ತವ್ಯ’ದಿಂದ ವಿನಾಯಿತಿ
ಸಾಗರ ನಗರಸಭೆ ‘ಪೌರಾಯುಕ್ತ ಹೆಚ್.ಕೆ ನಾಗಪ್ಪ’ಗೆ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ಸನ್ಮಾನ