ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಬಂಧ ಪಟ್ಟಂತೆ ಈಗಾಗಲೇ ಪೊಲೀಸರ ವಶದರಲ್ಲಿರುವ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ 4 ವಿಶಿಷ್ಟ ಪ್ರಬೇದದ ಬಾತುಕೋಳಿ ಸಾಕಿದ ಹಿನ್ನೆಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಚಿಕ್ಕಮಗಳೂರಿನ ಮುತ್ತೋಡಿ ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಮಾಡಿ ಬಾಡೂಟ, ಎಣ್ಣೆ ಪಾರ್ಟಿ ಕೂಡ ನಡೆಸುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯಿದೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಜೊತೆ ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.