ಮೈಸೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟ ಎದುರಾಗಲಿದೆ ಎಂಬುದಾಗಿ ಹಲವರ ಮಾತು. ಈ ನಡುವೆ ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷಅಟ ಎದುರಾಗಿದೆ. ಅದೇ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿಂದ ಸ್ನೇಹಮಯಿ ಕೃಷ್ಣ ಅವರು, ಮುಖ್ಯಮಂತ್ರಿ ಸಿದ್ಧರಾಮಯಯ್ ಹಾಗೂ ಅವರ ಕುಟುಂಬಸ್ಥರು ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಸಿದ್ಧರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಖರೀದಿಸಿದೆ ಎಂಬುದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಮೈಸೂರು ತಾಲ್ಲೂಕಿನ ಆಲನಹಳ್ಳಿಯಲ್ಲಿ ಸರ್ವೆ ನಂ.113/4ರಲ್ಲಿ 1 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಇದು ಬೇನಾಮಿ ಆಸ್ತಿಯಾಗಿದೆ. ಈ ಕುರಿತಂತೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ.
BREAKING : ‘ಮಹಾ ಕುಂಭಮೇಳ’ದಲ್ಲಿ ಕಾಲ್ತುಳಿತ ದುರದೃಷ್ಟಕರ ಅಪಘಾತ : `PIL’ ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ.!