ಬೆಂಗಳೂರು: ಮುಡಾ ಹಗರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ, ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆರ್ ಎಸ್ ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ.
ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾಗಿದೆ.
ಕಿರಣ್ ಎಸ್ ಎಂಬುವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 299, 352, 356 (2) ರಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ.
ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ
ಶೀಘ್ರವೇ ಆಧಾರ್ ನೊಂದಿಗೆ ಎಪಿಕ್(EPIC) ಜೋಡಣೆಗೆ ಕ್ರಮ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್