ದಾವಣಗೆರೆ : ಇತ್ತೀಚಿಗೆ ವಾಲ್ಮೀಕಿ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಇದೀಗ KRIDL ಬಿಲ್ ಬಾಕಿ ಉಳಿಸಿಕೊಂಡಿದ್ದರಿಂದ ಮನನೊಂದು ಗುತ್ತಿಗೆದಾರರೊಬ್ಬರು ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಹೌದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣಕಾಸು ವಿಚಾರದಲ್ಲಿ ಮೋಸ ಮಾಡಿದ್ದಾರೆಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಸಂತೆಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ ಈ ಒಂದು ಕಾಮಗಾರಿ ನಡೆದಿತ್ತು ಎಂದು ತಿಳಿದು ಬಂದಿದ್ದು. ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಪಿ ಎಸ್ ಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೆ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
80 ಲಕ್ಷ ಹಣ ಬಾಕಿ ಇತ್ತು ಎಂಬ ಮಾಹಿತಿ ಇದೆ. ತನಿಖೆ ಬಳಿಕ ಹೊರಬರಲಿದೆ ಎಂದು ದಾವಣಗೆರೆಯ ಎಸ್ಪಿ ಉಮಾ ಪ್ರಶಾಂತ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಕೆ ಆರ್ ಐಡಿಎಲ್ ಬಾಕಿ ಅಲ್ಲಿ ಬೇರೆ ಹಣ ಕೂಡ ಬರಬೇಕಾಗಿತ್ತು. ಕೊಟ್ಟ ಹಣ ಕೂಡ ವಾಪಸ್ ಬರದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನಿಖೆ ಬಳಿಕ ಅಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದು ಎಸ್ ಪಿ ಉಮಾ ಪ್ರಶಾಂತ್ ಅವರು ತಿಳಿಸಿದರು.