ಹಾಸನ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಮನೆಯ ಬಾಗಿಲಿನಲ್ಲೇ ಸಾಲ ಮರು ಪಾವತಿಸುವಂತೆ ಕುಳಿತಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತೆ ಮಹಿಳೆ ನೇಣಿಗೆ ಶರಣಾಗಿದ್ದಾರೆ.
ಹಾಸನದ ಆಲೂರಿನ ಹಳ್ಳಿಯೂರು ಗ್ರಾಮದಲ್ಲಿ ಕೆಂಚಮ್ಮ(50) ಎಂಬುವರೇ ಮನೆಯ ಬಾಗಿಲಿಗೆ ಬಂದು ಮೈಕ್ರೋಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೇಣಿಗೆ ಶರಣಾದಂತ ಕೆಂಚಮ್ಮ ಅವರು ಬಿಎಸ್ಎಸ್, ಇಐಎಫ್ ಹೆಸರಿನ ಫೈನಾನ್ಸ್ ಕಂಪನಿಯಿಂದ 2 ಲಕ್ಷ ಸಾಲ ಪಡೆದಿದ್ದರು. ಈ ಸಾಲಕ್ಕೆ ಪ್ರತಿ ತಿಂಗಳು ಸರಿಯಾಗಿ ಕಂತಿನ ಹಣವನ್ನು ಕಟ್ಟುತ್ತಿದ್ದರು. ಆದರೇ ಈ ತಿಂಗಳು ಕಟ್ಟಿಲ್ಲ ಎನ್ನುವ ಕಾರಣಕ್ಕೆ ಕೆಂಚಮ್ಮ ಅವರ ಮನೆ ಭಾಗಿಲಿಗೆ ಬಂದು ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದ್ದರು. ಈ ಹಿನ್ನಲೆಯಲ್ಲಿ ಕೆಂಚಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ.
ನೈಋತ್ಯ ರೈಲ್ವೆಯ ನೂತನ ‘ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್’ಗೆ ‘SC, ST ರೈಲ್ವೆ ನೌಕರರ ಸಂಘ’ ಸನ್ಮಾನ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :ರೈಲ್ವೆಯಲ್ಲಿ 1,003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Jobs Alert